ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಅರ್ಜಿಗಳನ್ನು ಸೇವಾ ಸಿಂಧು ತಂತ್ರಾಂಶದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನವಾಗಿದೆ.
*ಸ್ವಯಂ ಉದ್ಯೋಗ ಸಾಲ ಯೋಜನೆ:*
ಹಿಂದುಳಿದ ವರ್ಗಗಳ ಪ್ರವರ್ಗ-2ಎಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿ ಫಲಾನುಭವಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಸಹಾಯಧನ ನೀಡಲಾಗುವುದು.
*ಗಂಗಾ ಕಲ್ಯಾಣ ನೀರಾವರಿ ಯೋಜನೆ:*
ಹಿಂದುಳಿದ ವರ್ಗಗಳ ಪ್ರವರ್ಗ-2ಎಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ಜನಾಂಗದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಒಂದೇ ಸ್ಥಳದಲ್ಲಿ ಹೊಂದಿಕೊAಡAತೆ ಇರುವ ಕನಿಷ್ಠ 2 ಎಕರೆ ಮತ್ತು ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು.
*ಅರಿವು-ಶೈಕ್ಷಣಿಕ ಸಾಲ ಯೋಜನೆ:*
ಈ ಯೋಜನೆಯಡಿ ಸಿಇಟಿ ಮತ್ತು ನೀಟ್ ಇತ್ಯಾದಿ ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-2ಎಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಾದ ಇಂಜಿನಿಯರಿAಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್ಗಳ ವ್ಯಾಸಂಗಕ್ಕೆ ವಾರ್ಷಿಕ 1.00 ಲಕ್ಷ ರೂ.ಗಳಂತೆ ಕೋರ್ಸ್ನ ಅವಧಿಗೆ ಗರಿಷ್ಠ 4 ಲಕ್ಷ ರೂ.ಗಳಿಂದ ರೂ.5 ಲಕ್ಷಗಳಿಗೆ ವಾರ್ಷಿಕ ಶೇ.2ರ ಬಡ್ಡಿದರಲ್ಲಿ ಸಾಲ ಮಂಜೂರು ಮಾಡಲಾಗುವುದು. ಅಭ್ಯರ್ಥಿ ಮತ್ತು ಅವರ ಕುಟುಂಬದವರ ವಾರ್ಷಿಕ ವರಮಾನವು ರೂ.3.50 ಲಕ್ಷಗಳ ಮಿತಿಯಲ್ಲಿರಬೇಕು.
*ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ:*
ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿಹೆಚ್ಡಿ ಪೋಸ್ಟ್ ಡಾಕ್ಟçಲ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿಗ್ ಮತ್ತು ಟೆಕ್ನಾಲಜಿ, ಮ್ಯಾನೇಜ್ಮೆಂಟ್ ಮತ್ತು ಕಾಮರ್ಸ್, ಸೈನ್ಸ್ ಮತ್ತು ಟೆಕ್ನಾಲಜಿ, ಅಗ್ರಿಕಲ್ಚರ್ ಮತ್ತು ಅಲೈಡ್ ಸೈನ್ಸಸ್, ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್ ಮತ್ತು ಸೋಸಿಯಲ್ ಸೈನ್ಸಸ್) ವ್ಯಾಸಂಗಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ಪ್ರವರ್ಗ-2ಎಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದವರಾಗಿರಬೇಕು.
*ಸ್ವಾವಲಂಬಿ ಸಾರಥಿ ಯೋಜನೆ:*
ಹಿಂದುಳಿದ ವರ್ಗಗಳ ಪ್ರವರ್ಗ-2ಎಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ಜನಾಂಗದ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲಕ್ಕೆ ಶೇ.50 ರಷ್ಟು, ಗರಿಷ್ಠ ರೂ.3 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.
*ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ):*
ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು ಮತ್ತು ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ ಶೇ.20ರಷ್ಟು ಗರಿಷ್ಠ ರೂ.1 ಲಕ್ಷಗಳ ಸಹಾಯಧನ.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕ್ಲಬ್ ರೋಡ್ನ ಶ್ರೀ ಕುಮಾರಸ್ವಾಮಿ ಗುಡಿ ಎದುರು ವೀರನಗೌಡ ಕಾಲೋನಿಯ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಂಪರ್ಕಿಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.