alex Certify ಮರಾಠ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮರಾಠ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದೆ(ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ). ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ 3 ಬಿ ಅಡಿಯಲ್ಲಿ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು. (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು.). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಸರ್ಕಾರಿ ಸೌಲಭ್ಯವನ್ನು(ಸಾಲ-ಸಹಾಯಧನ) ಪಡೆಯುವ ಸಂಬಂಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಗಳಿಗೆ ಶೇ.1 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.(ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.)

ಸ್ವಯಂ ಉದ್ಯೋಗ ನೇರಸಾಲ ಮತು ಸಹಾಯಧನ ಯೋಜನೆಯಡಿ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ ರೂ. 98 ಸಾವಿರಗಳು, ಪಟ್ಟಣ ಪ್ರದೇಶದವರಿಗೆ ರೂ.1.20 ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯೊಳಗಿರಬೇಕು. ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ಈ ಯೋಜನೆಯಲ್ಲಿ ಕನಿಷ್ಠ ರೂ. 1 ಲಕ್ಷಗಳಿಂದ ರೂ. 2 ಲಕ್ಷಗಳ ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ.15 ರಷ್ಟು ಕನಿಷ್ಠ ರೂ. 20 ಸಾವಿರಗಳಿಂದ ಗರಿಷ್ಠ ರೂ. 30 ಸಾವಿರಗಳವರೆಗೆ ಸಹಾಯಧನ ಹಾಗೂ ಶೇ.85 ರಷ್ಟು ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು. 2 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಜೀಜಾವು-ಜಲಭಾಗ್ಯ ಯೋಜನೆಯ (ಗಂಗಾ ಕಲ್ಯಾಣ ನೀರಾವರಿ ಯೋಜನೆ)ಡಿ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ.98 ಸಾವಿರಗಳ ಮಿತಿಯೊಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟಿರಬೇಕು. ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 1 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು. ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಈ ಯೋಜನೆಯಲ್ಲಿ ಘಟಕ ವೆಚ್ಚ ರೂ.3.75 ಲಕ್ಷಗಳು (ವಿದ್ಯುದ್ದೀಕರಣ ಸೇರಿ) ಹಾಗೂ ಅವಶ್ಯವಿದ್ದಲ್ಲಿ ರೂ.50 ಸಾವಿರಗಳ ಸಾಲವನ್ನು ಶೇ.4 ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.

ಶೈಕ್ಷಣಿಕ ಸಾಲ ಯೋಜನೆಗಳು: ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು:- ಈ ಯೋಜನೆಯಲ್ಲಿ ಸಿಇಟಿ/ ಎನ್ಇಇಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಎಚ್.ಡಿನಲ್ಲಿ ವ್ಯಾಸಂಗ ಮಾಡುವ ಮರಾಠ ಸಮುದಾಯಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1 ಲಕ್ಷಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.3.50 ಲಕ್ಷಗಳ ಮಿತಿಯೊಳಗಿರಬೇಕು.

ಅರಿವು ಶೈಕ್ಷಣಿಕ ಸಾಲ ಯೋಜನೆಗೆ 2022-23ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2023-24 ನೇ ಸಾಲಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು 2ನೇ ವರ್ಷದ ವ್ಯಾಸಂಗ ದೃಢೀಕರಣ ಮತ್ತು ಮೊದಲನೆ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು.

ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆಯಡಿ ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ ಮರಾಠ ಸಮುದಾಯದ ವಿದ್ಯಾರ್ಥಿಗಳು ವಿದೇಶದಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಪೆÇೀಸ್ಟ್ ಡಾಕ್ಟೋರಲ್ ಪಿಹಚ್ಡಿ, ಮಾಸ್ಟರ್ ಡಿಗ್ರೀ, ಕೋರ್ಸುಗಳಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗೆ ವಾರ್ಷಿಕ ಗರಿಷ್ಟ ರೂ.10 ಲಕ್ಷ ಅಥವಾ ವಿದ್ಯಾರ್ಥಿಗಳ ಕೋರ್ಸ್ನ ಪೂರ್ಣ ಅವಧಿಗೆ ಗರಿಷ್ಠ ರೂ.20 ಲಕ್ಷಗಳವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲು ಅರ್ಜಿ ಆಹ್ವಾನಿಸಿದೆ. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.8 ಲಕ್ಷಗಳ ಮಿತಿಯೊಳಗಿರಬೇಕು.

ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ) ಅರ್ಹತೆಗಳು:̲- 2022-23 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2023-24 ನೇ ಸಾಲಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು 2ನೇ ವರ್ಷದ ವ್ಯಾಸಂಗ ದೃಢೀಕರಣ ಮತ್ತು ಮೊದಲನೇ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು.

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶ ಮತ್ತು ನಗರ ಪ್ರದೇಶದವರಿಗೆ ರೂ.8 ಲಕ್ಷಗಳು ಮೀರತಕ್ಕದಲ್ಲ. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 55 ವರ್ಷಗಳನ್ನು ಮೀರಿರತಕ್ಕದ್ದಲ್ಲ. ಈ ಯೋಜನೆಯ ಘಟಕ ವೆಚ್ಚ ಗರಿಷ್ಠ ರೂ.5 ಲಕ್ಷ ಸಾಲ, ರೂ.40 ಸಾವಿರ ಸಹಾಯಧನ ಆಗಿರುತ್ತದೆ. ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು. 03 ವರ್ಷಗಳಲ್ಲಿ ಮಾಸಿಕ ಕಂತುಗಳಲ್ಲಿ ಮಂಜೂರಾತಿ ಆದೇಶದಲ್ಲಿ ನಿಗದಿಪಡಿಸಿರುವಂತೆ ಅಸಲು ಮತ್ತು ಬಡ್ಡಿಯನ್ನು ಮರುಪಾವತಿಸುವುದು.

ಸ್ವಯಂ ಉದ್ಯೋಗ ಸಾಲ ಯೋಜನೆಯ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ)ಲ್ಲಿ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ.98 ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ.1.20 ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಡಿ ಉದ್ಯೋಗ ಪ್ರಾರಂಭಿಸಲು ಬ್ಯಾಂಕ್/ಸಹಕಾರಿ ಸಂಘಗಳಿಂದ ಸಾಲ ಪಡೆಯಬೇಕು ಹಾಗೂ ನಿಗಮದಿಂದ ಶೇ.20ರಷ್ಟು ಅಥವಾ ಗರಿಷ್ಠ ರೂ.1 ಲಕ್ಷಗಳನ್ನು ನಿಗಮದಿಂದ ಸಹಾಯಧನ ಮಂಜೂರು ಮಾಡಲಾಗುವುದು. ಬ್ಯಾಂಕ್ಗಳು ಮಂಜೂರು ಮಾಡುವ ಸಾಲಕ್ಕೆ ಬ್ಯಾಂಕ್ಗಳು ಚಾಲ್ತಿಯಲ್ಲಿರುವ ಬಡ್ಡಿಯನ್ನು ವಿಧಿಸಲಾಗುತ್ತದೆ.

ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ.98 ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ.1.20 ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘುವಾಹನ ಚಾಲನಾ ಪರವಾನಿಗೆಯನ್ನು ಹೊಂದಿರಬೇಕು. ಅರ್ಜಿದಾರರು ನಿರುದ್ಯೋಗಿಯಾಗಿರಬೇಕು. ಈ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾನುಭವಿಯು ಸ್ವಯಂ ಟ್ಯಾಕ್ಷಿಚಾಲನೆ ಉದ್ದೇಶಕ್ಕೆ ವಾಹನವನ್ನು ನೋಂದಾಯಿಸತಕ್ಕದ್ದು. ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನವನ್ನು (ಟ್ಯಾಕ್ಸಿ, ಟಾಟಾ ಎಸಿ, ಗೂಡ್ಸ್ ವಾಹನ ಮತ್ತಿತರ ನಾಲ್ಕು ಚಕ್ರಗಳ ವಾಹನ) ಖರೀದಿಸಲು ಬ್ಯಾಂಕ್/ ಹಣಕಾಸು ಸಂಸ್ಥೆಗಳು ಮಂಜೂರು ಮಾಡಿದ ಸಾಲದ ಶೇ.50ರಷ್ಟು ಅಥವಾ ಗರಿಷ್ಟ ರೂ.3 ಲಕ್ಷಗಳವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡುವುದು. ಉಳಿದ ಮೊತ್ತವನ್ನು ಬ್ಯಾಂಕ್/ ಹಣಕಾಸು ಸಂಸ್ಥೆಗಳಿಂದ ಸಾಲದ ರೂಪದಲ್ಲಿ ಪಡೆಯುವುದು ಈ ಸಾಲಕ್ಕೆ ಬ್ಯಾಂಕ್ / ಹಣಕಾಸು ಸಂಸ್ಥೆಗಳು ನಿಗದಿಪಡಿಸುವ ಬಡ್ಡಿಯನ್ನು ಪಾವತಿಸಬೇಕು.

ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೊಜನೆ: ಮರಾಠ ಸಮುದಾಯದ ಯುವಜನತೆಯನ್ನು ಕೌಶಲ್ಯ ಅಭಿವೃದ್ಧಿ ಪಡಿಸಿ ಉದ್ಯೊಗಮುಖಿಗಳನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ಐಟಿಐ, ಜಿಟಿಟಿಸಿ, ಕೆಜಿಟಿಟಿಐ ಮತ್ತಿತರ ಅಲ್ಪಾವಧಿ ಕೋರ್ಸ್ಗಳ ಮೂಲಕ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು ಕೌಶಲ್ಯ ಕರ್ನಾಟಕ ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಎಲ್ಲಾ ಯೋಜನೆಗಳಿಗೆ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕವೇ ಸಲ್ಲಿಸಬೇಕು. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ಲೈನ್ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು. ಅರ್ಜಿದಾರರು, ಸರ್ಕಾರದ ಹಾಗೂ ನಿಗಮದ ನಿರ್ದೇಶಕ ಮಂಡಳಿಯು ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ/ ನಿಬಂಧನೆಗಳನ್ನು ಹೊಂದಿದವರಾಗಿರಬೇಕು.

ಹೆಚ್ಚಿನ ವಿವರಗಳಿಗೆ ನಿಗಮದ ಸಹಾಯವಾಣಿ: 8867537799/ ದೂ.ಸಂ: 080-29903994 (ಬೆಳಗ್ಗೆ ರಿಂದ ಸಂಜೆ: 5.30 ವರೆಗೆ ಸಂಪರ್ಕಿಸಬಹುದಾಗಿದೆ). ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಚೇರಿ ವಿಳಾಸಗಳನ್ನು ಹಾಗೂ ಹೆಚ್ಚಿನ ವಿವರಗಳನ್ನು https://kmcdc.karnataka.gov.in ಇಲ್ಲಿ ತಿಳಿಯಬಹುದು. ಈ ಯೋಜನೆಗಳಿಗೆ ಅಕ್ಟೋಬರ್, 30 ರೊಳಗೆ ಆನ್ಲೈನ್ನಲ್ಲಿ ತಂತ್ರಾಂಶಗಳ ಮುಖಾಂತರ ಅರ್ಜಿ ಸಲ್ಲಿಸುವುದು. ಕಡೇ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಅಥವಾ ದೂ.ಸಂ.08272-221656 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...