ಬೆಂಗಳೂರು : ಮಾಂಸ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ..ಏನಪ್ಪ ಅಂದರೆ ಕೆಎಂಎಫ್ ಮಾದರಿಯಲ್ಲೇ ಸರ್ಕಾರ ಕುರಿ ಹಾಗೂ ಮೇಕೆ ಮಾಂಸ ಮಾರಾಟ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ಹೌದು, ಗ್ರಾಹಕರಿಗೆ ಉತ್ತಮ ಮಟ್ಟದ ಕುರಿ ಹಾಗೂ ಮೇಕೆ ಮಾಂಸ ಮಾರಾಟ ಮಾಡಲು ಸರ್ಕಾರ ಸಿದ್ದತೆ ನಡೆಸಿದೆ ಎಂದು ಮೂಲಗಳು ತಿಳಿಸಿದೆ. ರಾಜ್ಯಾದ್ಯಂತ ತನ್ನ ಮಳಿಗೆಗಳ ಮೂಲಕ ಪ್ಯಾಕ್ ಮಾಡಿದ ಕುರಿ ಮತ್ತು ಮೇಕೆ ಮಾಂಸವನ್ನು ಸಮರ್ಪಕ ಬೆಲೆಯಲ್ಲಿ ಮಾರಾಟ ಮಾಡಲು ಚಿಂತನೆ ನಡೆಸಿದೆ.
ರೈತರು ತಮ್ಮ ಕುರಿ ಮತ್ತು ಮೇಕೆಗಳಿಗೆ ಉತ್ತಮ ಬೆಲೆಯನ್ನು ಪಡೆಯಲು ಮತ್ತು ಜನರಿಗೆ ಗುಣಮಟ್ಟದ ಮಾಂಸವನ್ನು ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಕುರಿ ಮತ್ತು ಮೇಕೆ ಸಾಕುವ ರೈತರು ತಮ್ಮ ಪ್ರಾಣಿಗಳಿಗೆ ಲಾಭದಾಯಕ ಬೆಲೆಗಳನ್ನು ಪಡೆಯಬೇಕೆಂದು ನಾವು ಬಯಸುತ್ತೇವೆ. ಮಾಂಸ ಮಾರಾಟ ಮಳಿಗೆ ಸ್ಥಾಪನೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿಯೂ ಆಗಿರುವ ಕಾಂಗ್ರೆಸ್ ಶಾಸಕ ಟಿ.ಬಿ.ಜಯಚಂದ್ರ ಹೇಳಿದ್ದಾರೆ. ಈಗಾಗಲೇ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚೀಲನಹಳ್ಳಿಯಲ್ಲಿ 46 ಕೋಟಿ ರೂಪಾಯಿ ವೆಚ್ಚದಲ್ಲಿ ಹೈಟೆಕ್ ಕಸಾಯಿಖಾನೆ ಕಾಮಗಾರಿ ನಡೆಯುತ್ತಿದ್ದು, ಜನವರಿ ವೇಳೆಗೆ ಉದ್ಘಾಟನೆಯಾಗುವ ನಿರೀಕ್ಷೆಯಿದೆ.