ಬೆಳಗಾವಿ : ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ 2 ರೂಪಾಯಿ ಪ್ರೋತ್ಸಾಹಧ ನೀಡಲಾಗುವುದು ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಕಚ್ಚಾ ಪದಾರ್ಥಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಪಶು ಆಹಾರ ದರವನ್ನು ಪ್ರತಿ ಕೆ.ಜಿ ಗೆ 1 ರೂಪಾಯಿ ಹೆಚ್ಚಿಸಲಾಗಿದೆ. ಈ ದರವನ್ನು ಇಳಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಅಲ್ಲದೇ ಮುಂದಿನ ದಿನಗಳಲ್ಲಿ ರೈತರಿಗೆ ನೀಡುತ್ತಿರುವ ಹಾಲಿನ ಪ್ರೋತ್ಸಾಹ ದರವನ್ನು ರೂ.2 ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಹೈನುಗಾರಿಕೆ ವಿಶೇಷ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೈಗೊಳ್ಳಲಾದ ₹5 ಪ್ರೋತ್ಸಾಹ ಧನದಿಂದ 24 ಲಕ್ಷಕ್ಕೂ ಹೆಚ್ಚು ಹೈನುಗಾರರಿಗೆ ಅನುಕೂಲವಾಗುತ್ತಿದೆ. ಮುಂದಿನ ದಿನಗಳಲ್ಲಿ ರೈತರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ₹ 2 ಹೆಚ್ಚಿಸಲಾಗುವುದಾಗಿ ಹೇಳಿದ್ದಾರೆ.