alex Certify ರಾಜ್ಯದ ʻಹಾಲು ಉತ್ಪಾದಕರಿಗೆʼ ಗುಡ್ ನ್ಯೂಸ್ : ಶೀಘ್ರವೇ ʻಪ್ರೋತ್ಸಾಹ ಧನʼ 2 ರೂ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ʻಹಾಲು ಉತ್ಪಾದಕರಿಗೆʼ ಗುಡ್ ನ್ಯೂಸ್ : ಶೀಘ್ರವೇ ʻಪ್ರೋತ್ಸಾಹ ಧನʼ 2  ರೂ ಹೆಚ್ಚಳ

ಬೆಳಗಾವಿ : ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ ಹಾಲಿಗೆ 2 ರೂಪಾಯಿ ಪ್ರೋತ್ಸಾಹಧ ನೀಡಲಾಗುವುದು ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್‌ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು,  ಕಚ್ಚಾ ಪದಾರ್ಥಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಪಶು ಆಹಾರ ದರವನ್ನು ಪ್ರತಿ ಕೆ.ಜಿ ಗೆ 1 ರೂಪಾಯಿ ಹೆಚ್ಚಿಸಲಾಗಿದೆ. ಈ ದರವನ್ನು ಇಳಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಅಲ್ಲದೇ ಮುಂದಿನ ದಿನಗಳಲ್ಲಿ ರೈತರಿಗೆ ನೀಡುತ್ತಿರುವ ಹಾಲಿನ ಪ್ರೋತ್ಸಾಹ ದರವನ್ನು ರೂ.2 ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಹೈನುಗಾರಿಕೆ ವಿಶೇಷ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೈಗೊಳ್ಳಲಾದ ₹5 ಪ್ರೋತ್ಸಾಹ ಧನದಿಂದ 24 ಲಕ್ಷಕ್ಕೂ ಹೆಚ್ಚು ಹೈನುಗಾರರಿಗೆ ಅನುಕೂಲವಾಗುತ್ತಿದೆ. ಮುಂದಿನ ದಿನಗಳಲ್ಲಿ  ರೈತರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ₹ 2 ಹೆಚ್ಚಿಸಲಾಗುವುದಾಗಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...