alex Certify ಹಾಲು ಉತ್ಪಾದಕರಿಗೆ ಭರ್ಜರಿ ಗುಡ್ ನ್ಯೂಸ್ : ಆ.1 ರಿಂದ 3 ರೂ. ಹೆಚ್ಚುವರಿ ಹಣ ಪಾವತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಲು ಉತ್ಪಾದಕರಿಗೆ ಭರ್ಜರಿ ಗುಡ್ ನ್ಯೂಸ್ : ಆ.1 ರಿಂದ 3 ರೂ. ಹೆಚ್ಚುವರಿ ಹಣ ಪಾವತಿ

ಬೆಂಗಳೂರು : ಹಾಲು ಉತ್ಪಾದಕರಿಗೆ ಬಮೂಲ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಗಸ್ಟ್ 1 ರಿಂದ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ 3 ರೂ. ನೀಡಲಾಗುವುದು ಎಂದು ತಿಳಿಸಿದೆ.

ಪ್ರತಿ ಲೀಟರ್ ಹಾಲಿನ ದರವನ್ನು 3 ರೂ. ಹೆಚ್ಚಿಸಿರುವುದರಿಂದ ಹಾಲು ಉತ್ಪಾದಕರಿಗೆ ಆಗಸ್ಟ್ 1 ರಿಂದ ಪ್ರತಿ ಲೀಟರ್ ಹಾಲಿಗೆ 39.50 ರೂ. ಸಿಗಲಿದ್ದು, 1.12 ಲಕ್ಷ ಹಾಲು ಉತ್ಪಾದಕರಿಗೆ ಅನುಕೂಲವಾಗಲಿದೆ ಎಂದು ಬಮೂಲ್ ಅಧ್ಯಕ್ಷ ಎಚ್.ಪಿ ರಾಜ್ ಕುಮಾರ್ ತಿಳಿಸಿದ್ದಾರೆ.

ಪ್ರತಿ ಲೀಟರ್ ಹಾಲಿನಿಂದ ಸಂಗ್ರಹಿಸುವ 3 ರೂ. ನೇರವಾಗಿ ರೈತರಿಗೆ ಕೊಡಲಾಗುವುದು, ಈ ಹಿಂದೆ ಪ್ರತಿ ಲೀಟರ್ ಹಾಲಿಗೆ ಬಮೂಲ್ 31.50 ರೂ. ಕೊಡುತ್ತಿತ್ತು. ರಾಜ್ಯ ಸರ್ಕಾರ ಪ್ರೋತ್ಸಾಹಧನವಾಗಿ 5 ರೂ. ನೀಡುತ್ತಿತ್ತು. ಒಟ್ಟು 36.50 ರೈತರಿಗೆ ಸಿಗುತ್ತಿತ್ತು. ಆಗಸ್ಟ್ 1 ರಿಂದ 3 ರೂ. ಹೆಚ್ಚುವರಿಯಾಗಿ ನೀಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...