ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿನ ಶ್ರಮ ಶಕ್ತಿ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತ ವರ್ಗದ ಕುಲ ಕಸುಬುದಾರರಿಗೆ ತರಬೇತಿ ನೀಡಿ, ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯವನ್ನು ವೃದ್ಧಿಸಿಕೊಂಡು ಅದೇ ಕಸುಬನ್ನು ಮುಂದುವರೆಸಲು ಹಾಗೂ ಸಣ್ಣ ವ್ಯಾಪಾರವನ್ನು ಪ್ರಾರಂಭಿಸಲು ಹಾಗೂ ಅಭಿವೃದ್ಧಿಗೊಳಿಸಲು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಗೆ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ರಾಜ್ಯದ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು. ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು. ಎಲ್ಲಾ ಮೂಲಗಳಿಂದ ಕೌಟುಂಬಿಕ ವಾರ್ಷಿಕ ಆದಾಯ ರೂ. 3.50 ಲಕ್ಷದೊಳಗಿರಬೇಕು. ಆಸಕ್ತರು ವೆಬ್ ಸೈಟ್ https://kmdconline.karnataka.gov.in ನಲ್ಲಿ ಅರ್ಜಿಗಳನ್ನು ಸೆಪ್ಟೆಂಬರ್ 25ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ (ಕೇಂದ್ರಿಯ ವಿಭಾಗ), ಕೊಠಡಿ ಸಂಖ್ಯೆ ಎಫ್ ಎಫ್ -29/37, 1ನೇ ಮಹಡಿ, ಹಮೀದ್ ಷಾ ಕಾಂಪ್ಲೆಕ್ಸ್, ಹಲಸೂರು ಗೇಟ್ ಪೊಲೀಸ್ ಠಾಣೆ ಹತ್ತಿರ, ಕಬ್ಬನ್ ಪೇಟೆ ಮುಖ್ಯ ರಸ್ತೆ, ಬೆಂಗಳೂರು -02 ಅಥವಾ ದೂರವಾಣಿ ಸಂಖ್ಯೆ: 080-22114815, ಸಹಾಯವಾಣಿ ಸಂಖ್ಯೆ: 8277799990 (24/7) ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಕೇಂದ್ರಿಯ ವಿಭಾಗ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.