ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿನಲ್ಲಿ “ವೃತ್ತಿ ಪ್ರೋತ್ಸಾಹ” ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಈ ಸಾಲ ಸೌಲಭ್ಯವನ್ನು ಮತೀಯ ಅಲ್ಪಸಂಖ್ಯಾತರ ಸಮುದಾಯದ ಅರ್ಹ ಫಲಾನುಭವಿಗಳಿಗೆ ನೀಡತಕ್ಕದ್ದು. ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು. ಮತೀಯ ಅಲ್ಪಸಂಖ್ಯಾತರ ಸಮುದಾಯದ ಮಹಿಳೆಯರಿಗೆ ಆದ್ಯತೆ ನೀಡುವುದು. ಅರ್ಜಿದಾರರು ಅಥವಾ ಕುಟುಂಬದ ಸದಸ್ಯರು ಈ ಹಿಂದೆ ನಿಗಮದಿಂದ ಯಾವುದೆ ಸಾಲ ಸೌಲಭ್ಯ ಪಡೆದಿರಬಾರದು. (ಅರಿವು ಯೋಜನೆ ಹೊರತುಪಡಿಸಿ).
ಹಣ್ಣು ಹಂಪಲು, ತರಕಾರಿ, ಕೋಳಿ ಮತ್ತು ಮೀನು ಮಾರಾಟ., ಎಳನೀರು, ಕಬ್ಬಿನ ಹಾಲು, ತಂಪುಪಾನೀಯ ಮಾರಾಟ., ಬೇಕರಿ, ಲಾಂಡ್ರಿ. ಡ್ರೈಕ್ಲೀನಿಂಗ್, ಹೇರ್ ಡ್ರೆಸಿಂಗ್ ಸಲೂನಿ, ಬ್ಯೂಟಿ ಪಾರ್ಲರ್., ವಾಟರ್ ವಾಷ್ ಸರ್ವೀಸ್, ಪಂಚರ್ ಶಾಪ್, ಮೆಕಾನಿಕ್ ಶಾಪ್, ದ್ವಿಚಕ್ರ, ತ್ರಿಚಕ್ರ ವಾಹನ ರಿಪೇರಿ, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ ರಿಪೇರಿ, ರಿಪ್ರಿಜರೇಟರ್ ಮೋಟಾರ್ ರಿವೇಂಡಿಂಗ್ ವರ್ಕ್ಸ್, ಬಿದರಿ ವೇರ್ ಕೆಲಸ, ರೇಷ್ಮೆ ರೀಲಿಂಗ್ ಮತ್ತು ಟ್ವಿಸ್ಟಿಂಗ್, ಅಟಿಕೆಗೊಂಬೆ ತಯಾರಿಕೆದವರಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲಾಗುವುದು.
ಆಸಕ್ತರು ವೆಬ್ ಸೈಟ್ https://kmdonline.karnataka.gov.in ನಲ್ಲಿ ಅರ್ಜಿಗಳನ್ನು ಸೆಪ್ಟೆಂಬರ್ 25ರೊಳಗೆ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ (ಕೇಂದ್ರಿಯ ವಿಭಾಗ), ಕೊಠಡಿ ಸಂಖ್ಯೆ ಎಫ್ ಎಫ್ -29/37, 1ನೇ ಮಹಡಿ, ಹಮೀದ್ ಷಾ ಕಾಂಪ್ಲೆಕ್ಸ್, ಹಲಸೂರು ಗೇಟ್ ಪೊಲೀಸ್ ಠಾಣೆ ಹತ್ತಿರ, ಕಬ್ಬನ್ ಪೇಟೆ ಮುಖ್ಯ ರಸ್ತೆ, ಬೆಂಗಳೂರು -02 ಅಥವಾ ದೂರವಾಣಿ ಸಂಖ್ಯೆ: 080-22114815, ಸಹಾಯವಾಣಿ ಸಂಖ್ಯೆ: 8277799990 (24/7) ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಕೇಂದ್ರಿಯ ವಿಭಾಗ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.