ಅಲ್ಪಸಂಖ್ಯಾತ ಸಮುದಾಯಕ್ಕೆ ಇಲ್ಲಿದೆ ಗುಡ್ ನ್ಯೂಸ್. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಸೆ.25 ಕೊನೆ ದಿನಾಂಕ ಆಗಿದೆ.
2023-24ನೇ ಸಾಲಿನಲ್ಲಿ ಪ್ಯಾಸೆಂಜರ್ ಆಟೋರಿಕ್ಷ, ಗೂಡ್ಸ್ ವಾಹನ, ಟ್ಯಾಕ್ಸಿ ವಾಹನ ಖರೀದಿಸಲು ಸಹಾಯಧನ ಯೋಜನೆ ಮತ್ತು ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಗೆ ವಾಹನ ಖರೀದಿಸಲು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಎಲ್ಲಾ ಮೂಲಗಳಿಂದ ಕುಟುಂಬದ ಆದಾಯ ರೂ.4.50ಲಕ್ಷ ಮೀರಬಾರದು. ಮಹಿಳೆಯರಿಗೆ ಆದ್ಯತೆಯನ್ನು ನೀಡಲಾಗುವುದು. ಆಸಕ್ತರು ವೆಬ್ ಸೈಟ್ http://kmdconline.karnataka.gov.in ನಲ್ಲಿ ಅರ್ಜಿಗಳನ್ನು ಸೆಪ್ಟೆಂಬರ್ 25 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ (ಕೇಂದ್ರಿಯ ವಿಭಾಗ), ಕೊಠಡಿ ಸಂಖ್ಯೆ ಎಫ್ ಎಫ್ -29/37, 1ನೇ ಮಹಡಿ, ಹಮೀದ್ ಷಾ ಕಾಂಪ್ಲೆಕ್ಸ್, ಹಲಸೂರು ಗೇಟ್ ಪೊಲೀಸ್ ಠಾಣೆ ಹತ್ತಿರ, ಕಬ್ಬನ್ ಪೇಟೆ ಮುಖ್ಯ ರಸ್ತೆ, ಬೆಂಗಳೂರು -02 ಅಥವಾ ದೂರವಾಣಿ ಸಂಖ್ಯೆ: 080-22114815, ಸಹಾಯವಾಣಿ ಸಂಖ್ಯೆ: 8277799990 (24/7) ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಕೇಂದ್ರಿಯ ವಿಭಾಗ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.