ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಇವರ ವತಿಯಿಂದ 2023-24 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಂತ ಉದ್ಯೋಗ/ ಕಛೇರಿ, ಕಂಪೆನಿ ಉದ್ದಿಮೆಗಳಲ್ಲಿ ಉದ್ಯೋಗ ದೊರಕಿಸುವ ಸಲುವಾಗಿ ಮತ್ತು ಇತರೆ ಚಟುವಟಿಕೆಗಳಲ್ಲಿ ಉದ್ಯೋಗಕ್ಕಾಗಿ, ಭಾರಿ ವಾಹನ ಚಾಲನೆ, ಶಾರ್ಟ್ ಹ್ಯಾಂಡ್, ಸೆಕ್ಯುರಿಟಿ ಸರ್ವೀಸಸ್, ಆಫಿಸ್ ಸಾಫ್ಟ್ ಸ್ಕಿಲ್, ಬ್ಯೂಟಿ ಪಾರ್ಲರ್, (ಪುರುಷರಿಗೆ ಮತ್ತು ಮಹಿಳೆಯರಿಗೆ) ಕೋರ್ಸ್ ಗಳಿಗೆ ನಿಗಮದ ವತಿಯಿಂದ ತರಬೇತಿ ನೀಡಲು ಸಮುದಾಯ ಆಧಾರಿತ ತರಬೇತಿ ಯೋಜನೆ ಯಡಿಯಲ್ಲಿ ನಿಗಮದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ಯುವಕ/ಯುವತಿಯರು ನಿಗಮದ ವೆಬ್ಸೈಟ್ https://kmdconline.karnataka.gov.in/ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಲು ಡಿಸೆಂಬರ್, 15 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಅಲ್ಪಸಂಖ್ಯಾತ ಯುವಕ / ಯುವತಿಯರು ಆನ್ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಆನ್ಲೈನ್ನಲ್ಲಿ ಅಪ್ಲೋಡ್ ಮಾಡಿದ ದಾಖಲಾತಿಗಳನ್ನು “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಕಾಲೇಜು ರಸ್ತೆ, ಮಡಿಕೇರಿ ಜಿಲ್ಲೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ಮಾಹಿತಿ ಪಡೆಯಲು ಕಚೇರಿಯ ದೂ.ಸಂ. 08272-201449 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ದಿವಾಕರ ಬಿ.ಎಂ. ಅವರು ತಿಳಿಸಿದ್ದಾರೆ.