ಮಡಿಕೇರಿ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ 2023-24ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಎನ್ಎಂಡಿಎಫ್ಸಿ ಮಾದರಿಯಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಸಾಲ ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಎನ್ಎಂಡಿಎಫ್ಸಿ ಮಾದರಿಯಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮತ್ತು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವವಿದ್ಯಾಲಯದಿಂದ, ಭಾರತ ದೇಶದ ಪ್ರತಿಷ್ಠಿತ ಐಐಟಿ, ಐಐಎಂ, ಐಎಸ್ಸಿ ಸಂಸ್ಥೆಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಮಾಡಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಲ್ಲಿ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್ಸೈಟ್ https://kmdconline.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್ಎಸ್ಎಲ್ಸಿ ಅಂಕಪಟ್ಟಿ, ಎಸ್ಎಸ್ಎಲ್ಸಿ ವರ್ಗಾವಣೆ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪ್ರಸ್ತುತ ಅಧ್ಯಯನ ಪ್ರಮಾಣ ಪತ್ರ, ಕಾಲೇಜು ಶುಲ್ಕ ರಚನೆ, ಫೋಟೋ 05(ಪಾಸ್ ಪೋಟ್ ಸೈಜ್), ಈ ಎಲ್ಲಾ ದಾಖಲಾತಿಗಳನ್ನು “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೋಲೀಸ್ ಠಾಣೆ ಹತ್ತಿರ, ಕಾಲೇಜು ರಸ್ತೆ, ಮಡಿಕೇರಿ ಈ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಪಡೆಯಲು ಕಚೇರಿ ದೂರಾವಾಣಿ ಸಂಖ್ಯೆ 08272-201449 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ದಿವಾಕರ ಅವರು ತಿಳಿಸಿದ್ದಾರೆ.