alex Certify ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಅರಿವು ಯೋಜನೆಯಡಿ ಸೌಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಅರಿವು ಯೋಜನೆಯಡಿ ಸೌಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ,ಕ್ರಿಶ್ಚಿಯನ್,ಜೈನ್,ಬೌದ್ಧರು,ಸಿಖ್ಖರು,ಪಾರ್ಸಿಗಳು ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಆಯ್ಕೆಯಾಗುವ ಫ್ರೆಶ್/ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳು ಅಂದರೆ ಎಂಬಿಬಿಎಸ್, ಬಿಡಿಎಸ್, ಬ್ಯಾಚ್ಯುಲರ್ ಆಫ್ ಆಯುಷ್, ಬ್ಯಾಚ್ಯುಲರ್ ಆಫ್ ಅಗ್ರಿಕಲ್ಚರ್, ಬ್ಯಾಚ್ಯುಲರ್ ಆಫ್ ಇಂಜಿನಿಯರಿಂಗ್, ಬ್ಯಾಚ್ಯುಲರ್ ಆಫ್ ಟೆಕ್ನಲಾಜಿ, ಫಾರ್ಮಸಿ,ಅಗ್ರಿಕಲ್ಚರ್ ಸೈನ್ಸ್, ವೆಟರ್ನರಿ, ಫಾರ್ಮ್ ಸೈನ್ಸ್ ಕೋರ್ಸ್ ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳು ಅರಿವು ಯೋಜನೆಯಡಿ ಸಾಲ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ದಿ: 07.07.2024 ರ ವರೆಗೆ ಸಲ್ಲಿಸಬಹುದು.

ನಿಮಗದ ವೆಬ್ಸೈಟ್ www.kmdconline.karnataka.gov.inಮೂಲಕ ಅರ್ಜಿಯನ್ನು ಭರ್ತಿ ಮಾಡಿ ಅರ್ಜಿಯ ಪ್ರಿಂಟ್ಔಟ್ನ್ನು ತೆಗೆದುಕೊಂಡು ಎಸ್ಎಸ್ಎಲ್ಸಿ ಅಂಕಪಟ್ಟಿ, ಡಿಪ್ಲೊಮಾ /ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ, ಸಿಇಟಿ/ನೀಟ್ ಪ್ರತಿಗಳು ಮತ್ತು ಪ್ರವೇಶಪತ್ರ, ಇಂಡೆಮ್ನಿಟಿ ಬಾಂಡ್, ನೋಟರಿ, ವಿದ್ಯಾರ್ಥಿ ಮತ್ತು ಪೋಷಕರ ಸ್ವಯಂ ದೃಢಿಕರಣ ಪತ್ರ, ಈ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ ದಿನಾಂಕ 07.07.2024ರ ಒಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಅಚ್ಯುತರಾವ್ ಲೇಔಟ್, 4ನೇ ತಿರುವು, ನಂಜಪ್ಪ ಆಸ್ಪತ್ರೆ ಮುಂಭಾಗ ಶಿವಮೊಗ್ಗ ಇಲ್ಲಿಗೆ ಸಲ್ಲಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಶಿವಮೊಗ್ಗ ಇವರು ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...