ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2024-25 ನೇ ಸಾಲಿನಲ್ಲಿ ಬಿಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು ಪೋರ್ಟಲ್ನ ಆನ್ಲೈನ್ನಲ್ಲಿ (https://sevasindhu.karnataka.gov.in) ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ, 06 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್ಎಂಸಿ, ಕಾಲೇಜು ಹತ್ತಿರ, ಮಡಿಕೇರಿ ಹಾಗೂ ಕಚೇರಿ ದೂರವಾಣಿ ಸಂಖ್ಯೆ 08272 225528, ಮಾಹಿತಿ ಕೇಂದ್ರ, ಮಡಿಕೇರಿ 08272 -220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.