ಮಡಿಕೇರಿ : ಪ್ರಸಕ್ತ (2022-23) ಸಾಲಿಗೆ ಐಐಟಿ, ಐಐಐಟಿ, ಐಐಎಂ, ಐಐಎಸ್ಸಿ, ಎನ್ಐಟಿ, ಐಐಎಸ್ಇಆರ್, ಎಐಐಎಂಎಸ್, ಎನ್ಎಲ್ಯು, ಐಎನ್ಐ ಮತ್ತು ಐಯುಎಸ್ಎಲ್ಎ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್ ಅವಧಿಯಲ್ಲಿ ಒಂದು ಬಾರಿ ತಲಾ ಎರಡು ಲಕ್ಷಗಳ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು https://dom.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೌಲಾನ ಆಜಾದ್ ಭವನ ಎಫ್ಎಂಸಿ ಕಾಲೇಜು ಹತ್ತಿರ ಮಡಿಕೇರಿ ಇವರನ್ನು ಹಾಗೂ ದೂರವಾಣಿ ಸಂಖ್ಯೆ08272225528 ಹಾಗೂ 08272220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.