ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮೆರಿಟ್-ಕಮ್-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ, ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಮೆರಿಟ್-ಕಮ್-ಮೀನ್ಸ್ ವಿದ್ಯಾರ್ಥಿವೇತನ ವಿವಿಧ ತಾಂತ್ರಿಕ ಹಾಗೂ ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗರಿಷ್ಠ ರೂ. 25 ಸಾವಿರದವರೆಗೆ, ವಿದ್ಯಾರ್ಥಿವೇತನ ಪಡೆಯುವ ಅವಕಾಶವಿದೆ.
ಹೆಚ್ಚಿನ ಮಾಹಿತಿಗಾಗಿ https://dom. karnataka.gov.in ಅಥವಾ ಸಹಾಯವಾಣಿ ಸಂಖ್ಯೆ 8277799990 ಕರೆ ಮಾಡಿ