ಬೆಂಗಳೂರು : ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಹೊರಡುವ ರೈಲುಗಳ ಸಂಖ್ಯೆಯನ್ನು 9 ರಿಂದ 15 ಕ್ಕೆ ಹೆಚ್ಚಳ ಮಾಡಲಾಗಿದೆ. ಪ್ರಯಾಣಿಕರ ಬೇಡಿಕೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಆರ್ಸಿಎಲ್ (BMRCL) ತಿಳಿಸಿದೆ.
ಇಂದಿನಿಂದ (ಜುಲೈ) ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ. ಹತ್ತು ರೈಲುಗಳು ಪಟ್ಟಂದೂರು ಅಗ್ರಹಾರದವರೆಗೆ (ಐಟಿಪಿಎಲ್), ನಾಲ್ಕು ರೈಲು ವೈಟ್ಫೀಲ್ಡ್ ಮತ್ತು ಒಂದು ರೈಲು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಚಲಿಸಲಿವೆ ಎಂದು ಬಿಎಂಆರ್ಸಿಎಲ್ (BMRCL) ತಿಳಿಸಿದೆ