‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದಿನಿಂದ ನಾಗಸಂದ್ರ-ಮಾದಾವರ ಸಂಚಾರ ಆರಂಭವಾಗಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮವು ರೇಷ್ಮೆ ಸಂಸ್ಥೆಯಿಂದ ನಾಗಸಂದ್ರವರೆಗೆ ಇದ್ದ ಹಸಿರು ಮಾರ್ಗವನ್ನು ಮಾದಾವರವರೆಗೆ 3.7 ಕಿಲೋ ಮೀಟರ್ ವರೆಗೆ ಒಟ್ಟು 298 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದೆ.2019ರಲ್ಲಿಯೇ ಕಾಮಗಾರಿ ಆರಂಭಿಸಿದ್ದ ಈ ವಿಸ್ತರಣೆ ಮಾರ್ಗದಲ್ಲಿ ಕೆಲಸ ಪೂರ್ಣಗೊಳ್ಳುವುದು ವಿಳಂಬವಾಯಿತು
ಯಾವುದೇ ಉದ್ಘಾಟನಾ ಕಾರ್ಯಕ್ರಮ ಇಲ್ಲದೇ ನೇರವಾಗಿ ರೈಲು ಸಂಚಾರ ಆರಂಭಿಸಲಾಯಿತು. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕೆಲವು ದಿನಗಳ ಹಿಂದೆ ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭಿಸುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಚಿವ ಮನೋಹರ್ ಲಾಲ್ ಕಟ್ಟರ್ಗೆ ಪತ್ರವನ್ನು ಬರೆದಿದ್ದರು.