ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರದಲ್ಲೇ ಬಹುನಿರೀಕ್ಷಿತ ಲೇನ್ ಉದ್ಘಾಟನೆಯಾಗಲಿದೆ. ಹೌದು. ಬಹು ನಿರೀಕ್ಷಿತ ಹಳದಿ ಮಾರ್ಗ ಉದ್ಘಾಟನೆಗೆ ಸಿದ್ಧವಾಗಿದೆ.
ಆರ್ ವಿ ರಸ್ತೆಯಿಂದ ಬೊಮ್ಮಸಂದ್ರಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಟ್ರಯಲ್ ರನ್ ಮುಕ್ತಾಯವಾಗಲಿದ್ದು, ಸಿಗ್ನಲಿಂಗ್ ಟೆಸ್ಟ್ ಆರಂಭವಾಗಿದೆ. ಇದರ ನಡುವೆ ಶೀಘ್ರ ಲೇನ್ ಉದ್ಘಾಟನೆ ಸಮೀಪವಾಗುತ್ತಿದೆ.
ಕಳೆದ ಹದಿನೈದು ದಿನಗಳ ಹಿಂದೆ ಲೋಕೋ ಪೈಲಟ್ ಲೆಸ್ ರೈಲಿನ ಟ್ರಯಲ್ ರನ್ ಮಾಡಿದ್ದ ಬಿಎಂಆರ್ಸಿಎಲ್ ಟ್ರಯಲ್ ರನ್ ಅನ್ನು ಯಶಸ್ವಿಯಾಗಿ ಪೂರೈಸಿದ್ದು ಇದರ ಬೆನ್ನಲ್ಲೇ ಸಿಗ್ನಲಿಂಗ್ ಟೆಸ್ಟ್ ಆರಂಭಿಸಿದೆ. ಇದು ಮುಗಿಯುತ್ತಿದ್ದಂತೆ ದೂರ ಸಂಪರ್ಕ ಹಾಗೂ ವಿದ್ಯುತ್ ಪರೀಕ್ಷೆಗಳು ನಡೆಯಲಿವೆ. 18.82 ಕಿಮೀ ಉದ್ದವಿರುವ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದ ವರೆಗಿನ ಹಳದಿ ಮಾರ್ಗದಲ್ಲಿ ರೈಲು ಸಂಚರಿಸಲಿದೆ.
ಸದ್ಯ ಟ್ರಯಲ್ ಯಶಸ್ವಿ ಬೆನ್ನಲ್ಲೇ ಬಿಎಂಆರ್ ಸಿಎಲ್ ಸಿಗ್ನಲಿಂಗ್ ಟೆಸ್ಟ್ ಆರಂಭಿಸಿದ್ದು, ಸಿಗ್ನಲಿಂಗ್ ಟೆಸ್ಟ್ ಮುಗಿಯುತ್ತಿದ್ದಂತೆ ದೂರಸಂಪರ್ಕ ಹಾಗೂ ವಿದ್ಯುತ್ ಪರೀಕ್ಷೆಗಳು ಆರಂಭವಾಗಲಿದೆ.