ಬೆಂಗಳೂರು : ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET UG 2023) ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರಕಟಿಸಿದೆ.
ನೀಟ್ ಫಲಿತಾಂಶದ ಬೆನ್ನಲ್ಲೇ ನೀಟ್ ಅರ್ಹತೆ ಪಡೆದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯದ ಮೆಡಿಕಲ್ ಸೀಟುಗಳ ಸಂಖ್ಯೆ ಏರಿಕೆಯಾಗಿದೆ.
ಹೌದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯ ಸರ್ಕಾರಿ ಕೋಟಾದಡಿ ಲಭ್ಯವಿರುವ ವೈದ್ಯಕೀಯ ಸೀಟುಗಳ ಸಂಖ್ಯೆ ಏರಿಕೆಯಾಗಿದೆ. ಮಾಹಿತಿ ಪ್ರಕಾರ ಸರ್ಕಾರಿ ಕೋಟಾದಡಿ ಲಭ್ಯವಿರುವ ಸೀಟುಗಳ ಸಂಖ್ಯೆ 4,735 ರಿಂದ 4,899 ಕ್ಕೆ ಏರಿದೆ. ಈ ಮೂಲಕ ರಾಜ್ಯದಲ್ಲಿ ಲಭ್ಯವಿರುವ ಒಟ್ಟು ವೈದ್ಯಕೀಯ ಸೀಟುಗಳ ಸಂಖ್ಯೆ 11,320 ಕ್ಕೆ ಏರಿದೆ ಎಂಬ ಮಾಹಿತಿ ಲಭ್ಯವಾಗಿದೆ.ದೇಶಾದ್ಯಂತ ಈ ಬಾರಿ 20,87,462 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 20,38,596 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಒಟ್ಟು 11,45,976 ವಿದ್ಯಾರ್ಥಿಗಳು ಅರ್ಹತೆ ಗಳಿಸಿದ್ದಾರೆ.