alex Certify ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಮಡಿಕೇರಿ : 2023-24ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ಧಿಯನ್ನು ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಸೇವಾ ಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ನವೆಂಬರ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08272-225531 ಅನ್ನು ಸಂಪರ್ಕಿಸಬಹುದು.

ಯೋಜನೆಗಳ ವಿವರ: ಪರಿಶಿಷ್ಟ ಜಾತಿಯವರಿಗೆ ಸ್ವಯಂ-ಉದ್ಯೋಗ (ನೇರಸಾಲ) ಯೋಜನೆ(ಘಟಕ ವೆಚ್ಚ ರೂ.1 ಲಕ್ಷ), ಉದ್ಯಮಶೀಲತಾ ಯೋಜನೆ (ಘಟಕ ವೆಚ್ಚ ರೂ.2 ಲಕ್ಷ), ಉದ್ಯಮಶೀಲತಾ ಯೋಜನೆ (ಸರಕು ಸಾಗಣಿಕೆ/ ನಾಲ್ಕು ಚಕ್ರಗಳ ವಾಹನ ಮತ್ತಿತರ) (ಘಟಕ ವೆಚ್ಚ ರೂ.4 ಲಕ್ಷ), ಭೂ ಒಡೆತನ ಯೋಜನೆ,
ಪರಿಶಿಷ್ಟ ಪಂಗಡದವರಿಗೆ ಸ್ವಯಂ-ಉದ್ಯೋಗ (ನೇರಸಾಲ) ಯೋಜನೆ(ಘಟಕ ವೆಚ್ಚ ರೂ.1 ಲಕ್ಷ), ಉದ್ಯಮಶೀಲತಾ ಯೋಜನೆ (ಘಟಕ ವೆಚ್ಚ ರೂ.2 ಲಕ್ಷ), ಉದ್ಯಮಶೀಲತಾ ಯೋಜನೆ(ಸರಕು ಸಾಗಣಿಕೆ/ ನಾಲ್ಕು ಚಕ್ರಗಳ ವಾಹನ ಹಾಗೂ ಇತ್ಯಾದಿ)(ಘಟಕ ವೆಚ್ಚ ರೂ.4 ಲಕ್ಷ), ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ದಾಖಲಾತಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ-9480843155, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ-9480843156 ಹಾಗೂ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ-9480843157 ಇಲ್ಲಿಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...