alex Certify ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು :  ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ರಾಜ್ಯ ಸರ್ಕಾರ/ನಿಗಮದ ಯೋಜನೆಗಳು

  1. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ
  2. ಅರಿವು ಶೈಕ್ಷಣಿಕ ಸಾಲ ಯೋಜನೆ
  3. ಗಂಗಾ ನೀರಾವರಿ ಕಲ್ಯಾಣ ಯೋಜನೆ

ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಇತರೇ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು. 4. ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್‍ಗಳ ಸಹಯೋಗದೊಂದಿಗೆ), 5. ಸ್ವಾವಲಂಬಿ ಸಾರಥಿ ಯೋಜನೆ, 6. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ.

ಆಸಕ್ತರು ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಡಿ ನ.03 ರೊಳಗಾಗಿ ಅರ್ಜಿ ಸಲ್ಲಿಸುವುದು. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು  ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ http://kaad.karnataka.gov.in ಭೇಟಿ ನೀಡಬಹುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...