alex Certify ಅಲೆಮಾರಿ/ ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಲೆಮಾರಿ/ ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

2024-25 ನೇ ಸಾಲಿಗೆ ಕರ್ನಾಟಕ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಈ ಯೋಜನೆಗಳಿಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶವರಿಗೆ ರೂ.98 ಸಾವಿರ, ಪಟ್ಟಣ ಪ್ರದೇಶದವರಿಗೆ ರೂ.1.20 ಲಕ್ಷಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಈ ಸೌಲಭ್ಯ ಒದಗಿಸಲು ಸೇವಾಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ನಿಗಮದ ವೆಬ್ಸೈಟ್ www.kaad.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಬಹುದು.

ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್, 31 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ದೂ.ಸಂ.08272-221656 ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...