alex Certify ಒಕ್ಕಲಿಗ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಕ್ಕಲಿಗ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ವತಿಯಿಂದ ಪ್ರಸಕ್ತ ಸಾಲಿನ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಆಸಕ್ತ ಕರ್ನಾಟಕ ವಕ್ಕಲಿಗ ಸಮುದಾಯದ ಅರ್ಜಿದಾರರು ಸೇವಾಸಿಂಧು ಪೋರ್ಟಲ್‌ನ ವೆಬ್‌ಸೈಟ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಆಗಷ್ಟ್ 31ರೊಳಗಾಗಿ ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನವಾಗಿದೆ.

ಹಿಂದುಳಿದ ವರ್ಗಗಳ ಪ್ರವರ್ಗ-3 ಎ ನಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನ ಕೊಳಗ, ಉತ್ತಮ ಕೊಳಗ ಸಮುದಾಯಕ್ಕೆ ಸೇರಿದ ಜನಾಂಗದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಯೋಜನೆಗಳು:

*ಸ್ವಯಂ ಉದ್ಯೋಗ ನೇರ ಸಾಲ ಯೋಜನೆ:*
ಯೋಜನೆಯಡಿ ಘಟಕ ವೆಚ್ಚ ರೂ.2 ಲಕ್ಷಗಳಿಗೆ ಶೇ.30 ರಷ್ಟು ಗರಿಷ್ಟ ರೂ.30 ಸಾವಿರಗಳ ಸಹಾಯಧನ, ಉಳಿಕೆ ಶೇ.70ರಷ್ಟು ರೂ.1.70 ಲಕ್ಷಗಳನ್ನು ವಾರ್ಷಿಕ ಶೇ.4 ರ ಬಡ್ಡಿ ದರದಲ್ಲಿ ಸಾಲ. ರೂ.1 ಲಕ್ಷಕ್ಕಿಂತ ಹೆಚ್ಚಿನ ಸಾಲದ ಭದ್ರತೆಗೆ ಸಾಲದ ಮೊತ್ತದಷ್ಟು ಮೌಲ್ಯವಿರುವ ಅರ್ಜಿದಾರರು, ಜಾಮೀನುದಾರರ ಸ್ತಿರಾಸ್ತಿಯನ್ನು ನಿಗಮದ ಹೆಸರಿಗೆ ಆಧಾರ ನೀಡಬೇಕು.

*ಗಂಗಾ ಕಲ್ಯಾಣ ನೀರಾವರಿ ಯೋಜನೆ

ಒಕ್ಕಲಿಗ ಸಮುದಾಯದ ಅರ್ಹರಿಗೆ ವಾರ್ಷಿಕ ಆದಾಯ ರೂ.98 ಸಾವಿರಗಳ ಮಿತಿಯೊಳಗಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50 ಸಾವಿರಗಳ ಸಾಲವನ್ನು ಶೇ.4 ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ಸಹಾಯಧನದನ ಮೊತ್ತದಲ್ಲಿ ಪ್ರತಿ ಕೊಳವೆ ಬಾವಿಗೆ ರೂ.75 ಸಾವಿರಗಳನ್ನು ವಿದ್ಯುದ್ದೀಕರಣಕ್ಕೆ ಎಸ್ಕಾಂಗಳಿಗೆ ಪಾವತಿ ಮಾಡಲಾಗುವುದು.

*ಸ್ವಾವಲಂಬಿ ಸಾರಥಿ ಯೋಜನೆ

ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರ ವಾಹನ ಖರೀದಿಗೆ ಪಡೆಯುವ ಸಾಲಕ್ಕೆ ಶೇ.50 ರಷ್ಟು ಗರಿಷ್ಟ 3 ಲಕ್ಷಗಳ ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್‌ಗಳ ಮೂಲಕ ಅವರು ವಿಧಿಸುವ ಚಾಲ್ತಿ ಬಡ್ಡಿದರದಲ್ಲಿ ಸಾಲ ಒದಗಿಸಲಾಗುವುದು.

*ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)
ಒಕ್ಕಲಿಗ ಸಮುದಾಯದ ಅರ್ಹರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು, ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕ್‌ಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ ಶೇ.20 ರಷ್ಟು ಗರಿಷ್ಟ ರೂ.1 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು.

*ಶೈಕ್ಷಣಿಕ ಸಾಲ ಯೋಜನೆ

ಶೈಕ್ಷಣಿಕ ಸಾಲ ಯೋಜನೆಗೆ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ಸಿಇಟಿ, ನೀಟ್ ಮೂಲಕ ಪ್ರವೇಶ ಪಡೆದು ವೃತ್ತಿಪರ ಕೋರ್ಸ್ಗಳಾದ ಇಂಜಿಯರಿAಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸುಗಳಲ್ಲಿನ ವ್ಯಾಸಂಗಕ್ಕಾಗಿ ವಾರ್ಷಿಕ ರೂ.1.00 ಲಕ್ಷಗಳಂತೆ ಕೋರ್ಸ್ನ ಅವಧಿಗೆ ಗರಿಷ್ಟ 4 ಲಕ್ಷಗಳಿಂದ ರೂ. 5 ಲಕ್ಷಗಳವರೆಗೆ ವಾರ್ಷಿಕ ಶೇ.2ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುವುದು.

*ಶೈಕ್ಷಣಿಕ ಸಾಲ ಯೋಜನೆ:*
2022-23ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿಗೆ 3ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು 3ನೇ ವಷದ ವ್ಯಾಸಂಗ ದೃಢೀಕರಣ ಮತ್ತು ಎರಡನೇ ವಷÀðದ ಅಂಕಪಟ್ಟಿಯೊAದಿಗೆ ಅರ್ಜಿ ಸಲ್ಲಿಸಬೇಕು. 2023-24 ನೇ ಸಾಲಿನ ಸಾಲ ಪಡೆದು ಪ್ರಸಕ್ತ ಸಾಲಿನ 2ನೇ ಕಂತಿನ ಸಾಲಕ್ಕೆ 2ನೇ ವರ್ಷದ ವ್ಯಾಸಂಗ ದೃಢೀಕರಣ ಹಾಗೂ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು.

*ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ:*
ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ವಿದೇಶದಲ್ಲಿನ ಕ್ಯೂಎಸ್ ವಿಶ್ವ ವಿದ್ಯಾಲಯ ರ‍್ಯಾಂಕಿAಗ್ 500ರೊಳಗೆ ಬರುವ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟೋರಲ್, ಪಿಹೆಚ್‌ಡಿ, ಮಾಸ್ಟರ್ ಡಿಗ್ರೀ ಕೋರ್ಸುಗಳ ಉನ್ನತ ವ್ಯಾಸಂಗಕ್ಕೆ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗೆ ವಾರ್ಷಿಕ ಗರಿಷ್ಟ ರೂ.10 ಲಕ್ಷದಿಂದ ಕೋರ್ಸಿನ ಅವಧಿಗೆ ಗರಿಷ್ಟ ರೂ.20 ಲಕ್ಷಗಳವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು.

*ಸ್ವಾತಂತ್ರ‍್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ*:
ಒಕ್ಕಲಿಗ ಸಮುದಾಯದ ನಿರುದ್ಯೋಗಿ ಅರ್ಹ ಯುವಜನರನ್ನು ಗುರುತಿಸಿ ಕೌಶಾಲ್ಯಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನ ತರಬೇತಿ ಸಂಸ್ಥೆಗಳಾದ ಐಟಿಸಿಎಸ್, ಜಿಟಿಟಿಸಿ, ಕೆಜಿಟಿಟಿಐ, ಎಟಿಡಿಸಿ, ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಇದರ ಕೇಂದ್ರಗಳಾದ ಬೆಂಗಳೂರು, ಮುದ್ದೇನಹಳ್ಳಿ, ದಾಂಡೇಲಿ, ಇಳಕಲ್, ದಾವಣಗೆರೆ, ಕಲಬುರಗಿ ಮತ್ತು ಮೈಸೂರಿನಲ್ಲಿ ಇರುವ ಕೌಶಲ್ಯ ಅಭಿವೃದ್ದಿ ಕೇಂದ್ರಗಳ ಮೂಲಕ ಅಲ್ಪಾವಧಿ ಮತ್ತು ಉತ್ಕೃಷ್ಟ ಕೌಶಲ್ಯ ತರಬೇತಿಯನ್ನು ಆಯೋಜಿಸುವ ಯೋಜನೆಯಾಗಿದ್ದು, ಉದ್ಯೋಗಿಮುಖಿಗಳನ್ನಾಗಿಸಲು ತರಬೇತಿ ಕೊಡಿಸಲಾಗುವುದು.

ನಿಗಮವು ಅನುಷ್ಟಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಶಾಸಕರು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆ ಸಮಿತಿಗಳ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಸರ್ಕಾರದ ವಿವೇಚನಾ ಕೋಟಾ, ನಿಗಮದ ಅಧ್ಯಕ್ಷ, ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಬೇಕು.

ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅವಕಾಶ. 2023-24ನೇ ಸಾಲಿನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಆಯ್ಕೆ ಸಮಿತಿಗಳಲ್ಲಿ ಕಾರಣಾಂತರಗಳಿAದ ಆಯ್ಕೆಯಾಗದೇ ಇರುವ ಅರ್ಹ ಅರ್ಜಿದಾರರು ಪ್ರಸಕ್ತ ಸಾಲಿನಲ್ಲಿ ಅರ್ಜಿಯನ್ನು ಸಲ್ಲಿಸುವ ಅವಶ್ಯಕವಿರುವುದಿಲ್ಲ.ಈ ಮೇಲ್ಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಸೇವಾಸಿಂಧು ಪೋರ್ಟಲ್‌ನ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಮತ್ತು ಸ್ವಾತಂತ್ರ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ  ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬೇಕು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...