alex Certify ಒಕ್ಕಲಿಗ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಕ್ಕಲಿಗ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ’

ಹಿಂದುಳಿದ ವರ್ಗಗಳ ಪ್ರವರ್ಗ-3ಎ ನಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ / ಗೌಡ), ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನಕೊಳಗ / ಉತ್ತಮಕೊಳಗ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಗಳು: ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಶೈಕ್ಷಣಿಕ ಸಾಲ ಯೋಜನೆ, ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ.

ನಿಗಮವು ಅನುಷ್ಟಾನಗೊಳಿಸುವ ಯೋಜನೆಗಳಲ್ಲಿ ಮಾನ್ಯ ಶಾಸಕರು/ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ರವರ ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆ ಸಮಿತಿಗಳ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.

ಸರ್ಕಾರದ ವಿವೇಚನಾ ಕೋಟಾ/ ನಿಗಮದ ಅಧ್ಯಕ್ಷರು/ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ಲೈನ್ನಲ್ಲಿಯೇ ಅರ್ಜಿ ಸಲ್ಲಿಸಬೇಕು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು.
2023-24 ನೇ ಸಾಲಿನಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ್ದು, ಆಯ್ಕೆ ಸಮಿತಿಗಳಲ್ಲಿ ಕಾರಣಾಂತರಗಳಿಂದ ಆಯ್ಕೆಯಾಗದೇ ಇರುವ ಅರ್ಹ ಅರ್ಜಿದಾರರು 2024-25ನೇ ಸಾಲಿನ ಪ್ರಕಟಣೆಗೆ ಅರ್ಜಿಯನ್ನು ಸಲ್ಲಿಸುವ ಅವಶ್ಯಕವಿರುವುದಿಲ್ಲ. ಕಳೆದ ಸಾಲಿನ ಅರ್ಜಿಯನ್ನೇ ಆಯ್ಕೆ ಸಮಿತಿಗಳ ಮುಂದೆ ಆಯ್ಕೆಗೆ ಮತ್ತೊಮ್ಮೆ ಮಂಡಿಸಲಾಗುವುದು.

ಈ ಎಲ್ಲಾ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಸೇವಾಸಿಂಧುಪೋರ್ಟಲ್ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ಗಳ ಮೂಲಕ ಆನ್ಲೈನ್ ಮತ್ತು ಸ್ವಾತಂತ್ರ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ತಂತ್ರಾಶದ https://www.kaushalkar.com ನಲ್ಲಿ ಆಗಸ್ಟ್, 30 ರೊಳಗೆ ಸಲ್ಲಿಸುವುದು.ಯೋಜನೆಯ ಅರ್ಹತೆ ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗೆ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ಜಾಲತಾಣ https://kvcdc.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ ಇವರನ್ನು ದೂರವಾಣಿ ಸಂಖ್ಯೆ: 08272-221656 ಮುಖಾಂತರ ಕಚೇರಿಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...