ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಶೈಕ್ಷಣಿಕ ಸಾಲ ಯೋಜನೆ (ಹೊಸಬರು ಮತ್ತು ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಸಾಲ ಯೋಜನೆ (ಹೊಸಬರು ಮತ್ತು ನವೀಕರಣ), ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳಡಿಯಲ್ಲಿ ಸೌಲಭ್ಯ ಪಡೆಯಲು (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಸವಿತಾ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಹಿಂದುಳಿದ ವರ್ಗಗಳ ಪ್ರವರ್ಗ-3ಎ ರಲ್ಲಿ ಬರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ ರೆಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನಕೊಳಗ/ಉತ್ತಮಕೊಳಗ ಸಮುದಾಯಕ್ಕೆ ಸೇರಿದ ಆಸಕ್ತರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ/ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿರಬಾರದು. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಆಸಕ್ತರು ಸೇವಾಸಿಂಧು ಪೋರ್ಟಲ್ನ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ಮತ್ತು ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ತಂತ್ರಾಂಶದ https://www.kaushalkar.com ರಲ್ಲಿ ದಾಖಲೆಗಳ ಸಹಿತ ಆಗಸ್ಟ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ www.kvcdc.karnataka.gov.in ರಲ್ಲಿ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಭಾಗ್ಯನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ.: 08182-229634 ನ್ನು ಸಂಪರ್ಕಿಸುವುದು.