good ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 3ನೇ ಕಂತಿನ ‘ಗೃಹಲ’ಕ್ಷ್ಮಿ ಹಣ ಬಿಡುಗಡೆಯಾಗಿದೆ.
ಹೌದು, ನವೆಂಬರ್ 15 ರಿಂದ ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣವನ್ನು ಫಲಾನುಭವಿ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೂ ಸರ್ಕಾರ ಹಣ ವರ್ಗಾವಣೆ ಮಾಡುತ್ತಿದ್ದು, ಈಗಾಗಲೇ ಬೆಂಗಳೂರು ನಗರ, ಗ್ರಾಮಾಂತರ ಮಂಡ್ಯ, ಮೈಸೂರು ಮೊದಲಾದ ಕಡೆ ಮೂರನೇ ಕಂತಿನ ಹಣ ಜಮಾ ಪ್ರಕ್ರಿಯೆ ಆರಂಭವಾಗಿದೆ. ಪ್ರತಿ ತಿಂಗಳು 15 ರಿಂದ 20ನೇ ತಾರೀಕಿನ ಒಳಗೆ ಗೃಹಲಕ್ಷ್ಮಿ 2000 ರೂಪಾಯಿ ಮಹಿಳೆಯರ ಖಾತೆಗೆ ಜಮಾ ಆಗಲಿದೆಯಂತೆ.
ನಂತರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೊಪ್ಪಳ, ಕೊಡಗುಚಾಮರಾಜನಗರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಕೋಲಾರ, ಬೀದರ್ ನಲ್ಲಿ ಮಹಿಳೆಯರ ಖಾತೆಗೆ ಹಣ ಜಮಾ ಆಗಲಿದೆಯಂತೆ. ಈ ಜಿಲ್ಲೆಗಳಲ್ಲಿ ಹಣ ಹಾಕಿದ ನಂತರ ಉಳಿದ ಜಿಲ್ಲೆಗಳಲ್ಲೂ ಕೂಡ ಹಣ ಜಮಾ ಆಗಲಿದೆ.
ರಾಜ್ಯದಲ್ಲಿ ಸುಮಾರು 33 ಐಪಿಪಿಬಿ ಶಾಖೆಗಳಿದ್ದು, ಹಾಗಾಗಿ ಇಲ್ಲಿ ಖಾತೆ ತೆರೆದರೆ ಗೃಹಲಕ್ಷ್ಮಿ ಯೋಜನೆಯ ಹಣ ಬಹಳ ಬೇಗ ಮಹಿಳೆಯರ ಖಾತೆ ತಲುಪುತ್ತದೆ. ಪೋಸ್ಟ್ ಆಫೀಸ್ ಖಾತೆ ತೆರೆದ ಕೆಲವೇ ಗಂಟೆಗಳಲ್ಲಿ ಹಲವು ಮಹಿಳೆಯರಿಗೆ ಜಮಾ ಆಗಿದೆಯಂತೆ. ಹಾಗಾಗಿ ಮಹಿಳೆಯರಿಗೆ ಪೋಸ್ಟ್ ಆಫೀಸ್ ನಲ್ಲಿ ಅಕೌಂಟ್ ಮಾಡಿಸಲು ಸೂಚನೆ ನೀಡಲಾಗಿದೆ.ಮುಂದಿನ 15 ದಿನದೊಳಗೆ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಪಾವತಿಸಲಾಗುವುದು. 1902 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಹಿಳೆಯರು ಮಾಹಿತಿ ಪಡೆದುಕೊಳ್ಳಬಹುದು. ತಾಂತ್ರಿಕ ಕಾರಣದಿಂದ ಮಹಿಳೆಯರ ಖಾತೆಗೆ ಹಣ ಜಮಾ ಆಗಿಲ್ಲ. ಈ ಬಗ್ಗೆ ಮಾಹಿತಿ ಪಡೆದಿದ್ದು, ಇನ್ನೂ 15 ದಿನದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಸುವುದಾಗಿ ಹೇಳಿದ್ದಾರೆ.