ಬೆಂಗಳೂರು : ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕೊನೆಗೂ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಆಗಿದೆ. ಜುಲೈ , ಆಗಸ್ಟ್ ತಿಂಗಳ ಹಣ ಶೀಘ್ರವೇ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‘ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಿದೆ. ಶೀಘ್ರವೇ ಬಾಕಿ ಇರುವ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ’ ಹಣ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದರು. ಮಹಿಳಾ ಮತ್ತು ಮಕ್ಕಳ ಇಲಾಖೆಯಯಿಂದ ಈಗಾಗಲೇ ಜುಲೈ ತಿಂಗಳ ಹಣಕ್ಕೆ ಪತ್ರ ಬರೆಯಲಾಗಿದೆ. ಇನ್ನೂ ಹಣ ಬಿಡುಗಡೆ ಮಾಡಿಲ್ಲ. ಹೀಗಾಗಿ ಜುಲೈ ತಿಂಗಳ ಹಣ ಬರುವುದು ತಡವಾಗಲಿದೆ . ಹಣ ಬಂದ ಕೂಡಲೇ ಜಮಾ ಮಾಡುತ್ತೇವೆ ಎಂದರು.
9 ನೇ ತರಗತಿ ವಿದ್ಯಾರ್ಥಿನಿಗೆ ಅಭಿನಂದನೆ
ಬೆಳಗಾವಿಯ ಬಾಲಿಕಾ ಆದರ್ಶ ವಿದ್ಯಾಲಯದ 9 ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸ್ಪೂರ್ತಿ ತನ್ನ ಸಮಯ ಪ್ರಜ್ಞೆಯಿಂದ ತಿಲಕವಾಡಿಯ ಕಾಂಗ್ರೆಸ್ ರಸ್ತೆಯ ಮೊದಲನೇ ರೇಲ್ವೆ ಗೇಟ್ ಬಳಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಮೂವರ ಜೀವ ಉಳಿಸಿ ಮಾನವೀಯತೆ ಮೆರೆದ ಹಿನ್ನೆಲೆಯಲ್ಲಿ ಇಂದು ಬಾಲಕಿ ಸ್ಪೂರ್ತಿಯ ಜಾಣ್ಮೆಯನ್ನು ಪ್ರಶಂಸಿಸಿದರು.