ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯಡಿ ಆ.16 ರಂದು ಯಜಮಾನಿಯರ ಖಾತೆಗೆ 2 ಸಾವಿರ ಹಣ ಜಮಾ ಮಾಡಲಾಗುತ್ತದೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಮಾತನಾಡಿದ ಅವರು ಅರ್ಜಿ ಸಲ್ಲಿಸಲು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಆಗಸ್ಟ್ 16 ರಂದು ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದರು.
ಈಗಾಗಲೇ 80 ಲಕ್ಷಕ್ಕೂ ಹೆಚ್ಚು ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, ಅರ್ಜಿ ಸಲ್ಲಿಸಲು ಯಾರೂ ಹಣ ಕೊಡಬೇಡಿ. ಹಣ ವಸೂಲಿ ಮಾಡಿದರೆ ಸರ್ಕಾರದ ಗಮನಕ್ಕೆ ತನ್ನಿ ಎಂದರು. ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು.
ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು.ಇದಕ್ಕೂ ಮೊದಲು ಅರ್ಹ ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ಮೆಸೇಜ್ (ಶೆಡ್ಯೂಲಿಂಗ್) ಬಂದರಷ್ಟೇ ನೋಂದಣಿ ಕೇಂದ್ರಗಳಿಗೆ ತೆರಳಬೇಕಿತ್ತು. ಇದೀಗ ಎಸ್ಎಂಎಸ್ ಅವಲಂಭಿಸದೇ ನೇರವಾಗಿ ನೋಂದಣಿ ಕೇಂದ್ರಗಳಿಗೆ ದಾಖಲಾತಿಗಳೊಂದಿಗೆ ತೆರಳಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.