alex Certify GOOD NEWS : ರಾಜ್ಯ ಸರ್ಕಾರದಿಂದ Ph.D. ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ‘ಫೆಲೋಶಿಪ್’ ಗಾಗಿ ಅರ್ಜಿ ಆಹ್ವಾನ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ರಾಜ್ಯ ಸರ್ಕಾರದಿಂದ Ph.D. ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ‘ಫೆಲೋಶಿಪ್’ ಗಾಗಿ ಅರ್ಜಿ ಆಹ್ವಾನ.!

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳಲ್ಲಿ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ಹಿಂದುಳಿದ ವರ್ಗಗಳ ಅರ್ಹ ಹೊಸ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ವಿವರಗಳು http://bcwd.karnataka.gov.in ವೆಬ್ ಸೈಟ್ ನಲ್ಲಿ ಲಭ್ಯವಿದ್ದು ಅಭ್ಯರ್ಥಿಗಳು ಮಾಹಿತಿಯನ್ನು ತಿಳಿದು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿರಬೇಕು. ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಪ್ರವರ್ಗ :ರೂ 4.50 ಲಕ್ಷ , 2 (ಎ), 3(ಎ) ಹಾಗೂ 3(ಬಿ) : ರೂ 3.40 ಲಕ್ಷ ಮಿತಿ ಇರಬೇಕು. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು.

ಆಸಕ್ತರು ಅರ್ಜಿಯನ್ನು ಜನವರಿ 20 ಸಂಜೆ 5 ಗಂಟೆಯೊಳಗೆ ಸಹಾಯಕ ನಿರ್ದೇಶಕರ ಕಛೇರಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ ಸಂ: 215, 2ನೇ ಮಹಡಿ, ಜಿಲ್ಲಾಡಳಿ ಭವನ, ದೇವನಹಳ್ಳಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ 8050770004 ಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...