alex Certify ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ 262 ಸರ್ಕಾರಿ ಶಾಲೆಗಳಲ್ಲಿ ‘ಪ್ರೀ ನರ್ಸರಿ’ ತರಗತಿ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ 262 ಸರ್ಕಾರಿ ಶಾಲೆಗಳಲ್ಲಿ ‘ಪ್ರೀ ನರ್ಸರಿ’ ತರಗತಿ ಆರಂಭ

ಬೆಂಗಳೂರು : ಪೋಷಕರಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ರಾಜ್ಯದ 262 ಸರ್ಕಾರಿ ಶಾಲೆಗಳಲ್ಲಿ ‘ಪ್ರೀ ನರ್ಸರಿ’ಶಾಲೆಗಳ ಸ್ಥಾಪನೆಗೆ ಅನುಮತಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.

ಈ ಕುರಿತು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾಯೋಗಿಕವಾಗಿ ಷರತ್ತುಗಳಿಗೊಳಪಟ್ಟು ಪ್ರಾರಂಭಿಸಲು ಶಿಕ್ಷಣ ಮಂತ್ರಾಲಯದ ಪಿ.ಎ.ಬಿಯಲ್ಲಿ ಅನುಮತಿ ನೀಡಿರುತ್ತಾರೆ.

 ರಾಜ್ಯದ 262 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಈ ಕೆಳಗಿನ ವಿವರವಾದ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

1. 2023-24ನೇ ಸಾಲಿನ ಪೂರ್ವ ಪ್ರಾಥಮಿಕ ತರಗತಿಗಳನ್ನು ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡು ಆಗಸ್ಟ್ ತಿಂಗಳಿನಿಂದ ಪ್ರಾರಂಭಿಸುವುದು.
2. ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ಸರ್ಕಾರಿ ಪ್ರಾಥಮಿಕ ಶಾಲೆಗಳ ಎಸ್.ಡಿ.ಎಂ.ಸಿಯವರು ಮತ್ತು ಶಿಕ್ಷಕರು ಸ್ಥಳೀಯ ಮಟ್ಟದಲ್ಲಿ ಪ್ರಚಾರವನ್ನು ಸರ್ಕಾರಿ ಪ್ರಾಥಮಿಕ ಶಾಲೆಗಳ ಎಸ್.ಡಿ.ಎಂ.ಸಿಯವರು ಮತ್ತು ಶಿಕ್ಷಕರು ಮಾಡುವುದು.
3. 2023-24ನೇ ಸಾಲಿನ ಪೂರ್ವ ಪ್ರಾಥಮಿಕ LKG ಯ ಒಂದು ವಿಭಾಗವನ್ನು ಮಾತ್ರ ಪ್ರಾರಂಭಿಸುವುದು, ಈ LKG ತರಗತಿಗೆ 4 ವರ್ಷದಿಂದ 5 ವರ್ಷದ ವಯೋಮಿತಿಯ ಒಳಗಿನ ಮಕ್ಕಳನ್ನು ದಾಖಲುಮಾಡಿಕೊಳ್ಳುವುದು. ವಿಭಾಗ ಪ್ರಾರಂಭಿಸಲು ವರ್ಷದಿಂದ ವರ್ಷದ 5 ವಯೋಮಾನದ ಕನಿಷ್ಠ 201 ಮಕ್ಕಳು ಪಡೆಯುವಂತಿರಬೇಕು ಹಾಗೂ ಗರಿಷ್ಠ 30 ಮಕ್ಕಳನ್ನು ಮಾತ್ರ ದಾಖಲಿಸುವುದು. 4 ಪ್ರವೇಶ
4. ಪೂರ್ವ ಪ್ರಾಥಮಿಕ ತರಗತಿಯನ್ನು ಪ್ರಾರಂಭಿಸಲು ಗುರುತಿಸಿಕೊಳ್ಳುವುದು ಹಾಗೂ ಒಂದು ಕೊಠಡಿಯನ್ನು ಕೊಠಡಿ ಸಜ್ಜುಗೊಳಿಸುವುದು. ಅವಶ್ಯ ಸಾಧನ ಸಾಮಗ್ರಿಗಳನ್ನು ನಿಯಮಾನುಸಾರ ಖರೀದಿಸುವುದು. ಕೊಠಡಿ ಸಜ್ಜುಗೊಳಿಸಲು ಸ್ಥಳೀಯ ಚಿತ್ರಕಲಾ ಶಿಕ್ಷಕರನ್ನು / ಚಿತ್ರಕಲಾ ಪರಿಣಿತರನ್ನು ಬಳಸಿಕೊಂಡು ಮಕ್ಕಳೀಗೆ ಆಕರ್ಷಕವಾದ ಚಿತ್ರಗಳ ರಚನೆ, ಗೋಡೆ ಮೇಲೆ ನೆಲ ಮಟ್ಟದಿಂದ 2 ಅಡಿಯವರೆಗೆ ಮಕ್ಕಳು ಬರೆಯಲು/ ಚಿತ್ರ ರಚಿಸಲು ಸಾಧ್ಯವಾಗುವಂತೆ ಗ್ರೀನ್ ಬೋರ್ಡ ಕರಿಹಲಗೆ ರಚನೆ ಮುಂತಾದ ಕಾರ್ಯಗಳನ್ನು ಮಾಡುವುದು, ಖರೀದಿಸಬೇಕಾದ ಸಾಧನ ಸಾಮಗ್ರಿಗಳ ಪಟ್ಟಿಯನ್ನು ಹಾಗೂ ಕೆಲವು ಕೊಠಡಿಯ ವಿನ್ಯಾಸದ ಕೆಲವು ಮಾದರಿ ಉದಾಹರಣೆಗಳನ್ನು ಕೂಡಲೇ ಒದಗಿಸಲಾಗುವುದು.

ಪ್ರತಿ ಪೂರ್ವ ಪ್ರಾಥಮಿಕ ತರಗತಿಗೆ ಒಬ್ಬ ಶಿಕ್ಷಕಿ/ಶಿಕ್ಷಕ ಮತ್ತು ಒಬ್ಬರು ಆಯಾರವರನ್ನು ಶಾಲಾ ಎಸ್.ಡಿ.ಎಂ.ಸಿ ವತಿಯಿಂದ ತಾತ್ಕಾಲಿಕವಾಗಿ 10 ತಿಂಗಳುಗಳ ಅವಧಿಗೆ ಈ ಕೆಳಕಂಡ ಮಾನದಂಡದಂತೆ ನೇಮಕ ಮಾಡಿಕೊಳ್ಳುವುದು ಪೂರ್ವ ಪ್ರಾಥಮಿಕ ತರಗತಿ ಶಿಕ್ಷಕಿ/ಶಿಕ್ಷಕರಿಗೆ ಪ್ರಸ್ತುತ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಸಂಭಾವನೆಯಂತೆಯೇ ಮಾಸಿಕ ರೂ. 7500,00 ಮತ್ತು ಆಯಾ ಇವರಿಗೆ ಮಾಸಿಕ ರೂ. 5000.00 ಸಂಭಾವನೆಯನ್ನು ನಿಗದಿಪಡಿಸಲಾಗಿದೆ. ವೇತನ ಅನುದಾನವನ್ನು ಆಯಾ ಎಸ್.ಡಿ.ಎಂ.ಸಿ. ಖಾತೆಗೆ ಸಮಗ್ರ ಶಿಕ್ಷಣ ಕರ್ನಾಟಕ ಕಛೇರಿಯಿಂದ ಬಿಡುಗಡೆ ಮಾಡಲಾಗುವುದು.

ಶಿಕ್ಷಕಿ/ಶಿಕ್ಷಕರನ್ನು ಮತ್ತು ಆಯಾರವರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಈ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ:

i. ಶಿಕ್ಷಕರು: ಪೂರ್ವ ಪ್ರಾಥಮಿಕ ತರಗತಿ ಶಿಕ್ಷಕಿ/ಶಿಕ್ಷಕ ಪದವಿ ಪೂರ್ವ ಶಿಕ್ಷಣದಲ್ಲಿ (PUC) ಕನಿಷ್ಠ 50% ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು ಮತ್ತು NCTE ಮಾನ್ಯತೆ ಪಡೆದ ಸಂಸ್ಥೆಯಿಂದ ಎರಡು ಅಥವಾ ಎರಡು ವರ್ಷಕ್ಕಿಂತ ಹೆಚ್ಚಿನ ಅವಧಿಯ ಡಿಪ್ಲೋಮಾ ಇನ್ ನರ್ಸರಿ ಟೀಚರ್ ಎಜ್ಯುಕೇಶನ್/ಪ್ರೀ-ಸ್ಕೂಲ್ ಎಜ್ಯುಕೇಶನ್/ಅರ್ಲಿ ಚೈಲ್ಡ್ ಹುಡ್ ಎಜ್ಯುಕೇಶನ್ ಪ್ರೋಗ್ರಾಂ (ಡಿ.ಇ.ಸಿ.ಇಡಿ) ಅಥವಾ ಬಿ.ಇಡಿ (ನರ್ಸರಿ) ಅರ್ಹತೆ [Diploma in Nursery Teachers Education/ pre-School Education/Early Childhood Education Programme (D.E.C.ED) of duration of not less than two years or B.Ed(Nursery)] ಹೊಂದಿರಬೇಕು, ವಯಸ್ಸು 45 ವರ್ಷಕ್ಕಿಂತ ಕಡಿಮೆ ಇರಬೇಕು. ಒಂದು ವೇಳೆ ಈ ಮೇಲಿನ ಪೂರ್ವ ಪ್ರಾಥಮಿಕ ಶಿಕ್ಷಕರ ತರಬೇತಿ ಪಡೆದ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಪಿ.ಯು.ಸಿ.ಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆಯುವುದರ ಜೊತೆಗೆ NCTE ಮಾನ್ಯತೆ ಪಡೆದ ಸಂಸ್ಥೆಯಿಂದ ಡಿ.ಎಡ್ ತರಬೇತಿ ಹೊಂದಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಭ್ಯರ್ಥಿಗಳನ್ನು ಪರಿಗಣಿಸುವುದು.

ಆಯಾಗಳ ಹುದ್ದೆಗೆ ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು ಕಡ್ಡಾಯವಾಗಿ ಮಹಿಳೆಯಾಗಿರಬೇಕು, ವಯಸ್ಸು 45 ವರ್ಷಕ್ಕಿಂತ ಕಡಿಮೆ ಇರಬೇಕು ಮತ್ತು ಸ್ಥಳೀಯರಾಗಿರಬೇಕು. (ಆಯಾ ಗ್ರಾಮ/ವಾರ್ಡ್ ವ್ಯಾಪ್ತಿಯವರು), ಒಂದು ವೇಳೆ ಸ್ಥಳಿಯವಾಗಿ ಯಾವುದೇ ಅಭ್ಯರ್ಥಿ ಲಭ್ಯವಿಲ್ಲದೇ ಇದ್ದಲ್ಲಿ ಸರ್ಕಾರಿ ಶಾಲೆ ಇರುವ ಪಂಚಾಯಿತಿ ಪರಿಗಣಿಸಬೇಕು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...