ಬೆಂಗಳೂರು : ರಾಜ್ಯ ಸರ್ಕಾರವು ಪೋಷಕರಿಗೆ ಸಿಹಿಸುದ್ದಿ ನೀಡಿದ್ದು, ಈ ವರ್ಷದ ಸೆಪ್ಟೆಂಬರ್ ನಿಂದಲೇ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳು ಆರಂಭಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.
ಈ ವರ್ಷದ ಸೆಪ್ಟೆಂಬರ್ ನಿಂದ ಸರ್ಕಾರಿ ಶಾಲೆಗಳಲ್ಲಿ 4 ಹಾಗೂ 5 ವರ್ಷದ ಮಕ್ಕಳಿಗಾಗಿ ಎಲ್ ಕೆಜಿ ಹಾಗೂ ಯುಕೆಜಿ ತರಗತಿ ಆರಂಭಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ರಾಜ್ಯದ ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಲಿದೆ.
ರಾಜ್ಯ ಸರ್ಕಾರವು ಆರಂಭಿಕ ಹಂತದಲ್ಲಿ ಬೆಂಗಳೂರು ದಕ್ಷಿಣದಲ್ಲಿ 10 ಮತ್ತು ಬೆಂಗಳೂರು ಉತ್ತರದಲ್ಲಿ 4 ಸೇರಿದಂತೆ 262 ಶಾಲೆಗಳಲ್ಲಿ ಎಲ್‌ಕೆಜಿ , ಯುಕೆಜಿ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಪ್ರಸ್ತುತ, 276 ಕರ್ನಾಟಕ ಸಾರ್ವಜನಿಕ ಶಾಲೆಗಳು ಸೇರಿದಂತೆ ಸುಮಾರು 900 ಶಾಲೆಗಳು ಎಲ್‌ಕೆಜಿ ಹಾಗೂ ಯುಕೆಜಿ ವಿಭಾಗಳನ್ನು ಹೊಂದಿವೆ.