ಪಿಂಚಣಿದಾರರು ಪ್ರತಿ ವರ್ಷದ ನವೆಂಬರ್ ತಿಂಗಳಿನಲ್ಲಿ ಜೀವಿತ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗಿದ್ದು, ಇದನ್ನು ಸರಳಗೊಳಿಸುವ ಸಲುವಾಗಿ ಡಿಜಿಟಲ್ ಜೀವಿತ ಪ್ರಮಾಣ ಪತ್ರ (ಡಿಎಲ್‌ಸಿ) ಯೋಜನೆಯನ್ನು ಜಾರಿಗೊಳಿಸಲಾಗಿದೆ.
ಪಿಂಚಣಿದಾರರು ಡಿಜಿಟಲ್ ಜೀವಿತ ಪ್ರಮಾಣ ಪತ್ರ ಸಲ್ಲಿಸಬಹುದಾಗಿದ್ದು, ಇದನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಈ ಬಾರಿ ನವೆಂಬರ್ ತಿಂಗಳಿನಲ್ಲಿ ಬೃಹತ್ ಆಂದೋಲನವನ್ನು ನಡೆಸಲು ಸಿದ್ಧತೆ ನಡೆಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ, ಡಿಜಿಟಲ್ ಜೀವಿತ ಪ್ರಮಾಣ ಪತ್ರ ಸಲ್ಲಿಕೆಯನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ಈ ಆಂದೋಲನಕ್ಕೆ ಚಾಲನೆ ನೀಡುತ್ತಿದೆ ಎಂದು ಹೇಳಿದೆ.