ಬೆಂಗಳೂರು : ಬೆಂಗಳೂರಿನ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಜನವರಿಯಿಂದ ಬೆಂಗಳೂರು ನಗರದಲ್ಲಿರುವ 169 ಇಂದಿರಾ ಕ್ಯಾಂಟೀನ್ ಗಳಲ್ಲಿ ʻರಾಗಿ ಮುದ್ದೆʼ ಊಟ ನೀಡಲು ನಿರ್ಧರಿಸಿದೆ.
ಸದ್ಯ ಬೆಂಗಳೂರು ನಗರದ ಇಂದಿರಾ ಕ್ಯಾಂಟೀನ್ಗಳಲ್ಲಿ ರೈಸ್ಭಾತ್, ಉಪ್ಪಿಟ್ಟು, ಅನ್ನ, ಸಾಂಬಾರ್ ಮಾತ್ರ ಸಿಗುತ್ತಿತ್ತು. ಮುಂದಿನ ವರ್ಷದಿಂದ ರಾಗಿ ಮುದ್ದೆ ಊಟವನ್ನು ಮೆನುವಿನಲ್ಲಿ ಸೇರಿಸಲು ನಿರ್ಧರಿಸಲಾಗಿದೆ.
ಇಂದಿರಾ ಕ್ಯಾಂಟೀನ್ ಗಳಿಗೆ ಆಹಾರ ಪೂರೈಕೆದಾರರ ಟೆಂಡರ್ ಆಹ್ವಾನಿಸುವುದಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, ಶೀಘ್ರವೇ ಬಿಬಿಎಂಪಿ ಟೆಂಡರ್ ಆಹ್ವಾನಿಸಲಿದೆ. ಜೊತೆಗೆ ಬೆಂಗಳೂರು ನಗರದಲ್ಲಿ 19 ಮೊಬೈಲ್ ಇಂದಿರಾ ಕ್ಯಾಂಟೀನ್ ಗಳನ್ನು ದುರಸ್ತಿ ಪಡಿಸಲಾಗಿದೆ. ಮುಂದಿನ ವಾರದಲ್ಲಿ ಮೊಬೈಲ್ ಇಂದಿರಾ ಕ್ಯಾಂಟೀನ್ ಪುನರ್ ಆರಂಭಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.