ಬೆಳಗಾವಿ : ಉತ್ತರ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಒಟ್ಟು ₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ಈ ಯೋಜನೆಗಳಿಂದ ಒಟ್ಟು ರೂ. 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ. ಇವುಗಳಿಂದ ಈ ಪ್ರದೇಶದಲ್ಲಿ 3,538 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಸರ್ಕಾರದ ಕಡೆಯಿಂದ ನಡೆಯುತ್ತಿರುವ ಇಂತಹ ಸಂಘಟಿತ ಪ್ರಯತ್ನಗಳು ‘ಬೆಂಗಳೂರಿನ ಆಚೆ ಉಪಕ್ರಮದ ಭಾಗವಾಗಿವೆ ಎಂದು ಹೇಳಿದ್ದಾರೆ.