alex Certify ಉತ್ತರ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ : 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ, 3,538 ಜನರಿಗೆ ಉದ್ಯೋಗ ಸೃಷ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ : 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ, 3,538 ಜನರಿಗೆ ಉದ್ಯೋಗ ಸೃಷ್ಟಿ

ಬೆಳಗಾವಿ : ಉತ್ತರ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಉತ್ತರ ಕರ್ನಾಟಕದ  ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಒಟ್ಟು ₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಈ ಯೋಜನೆಗಳಿಂದ ಒಟ್ಟು ರೂ. 9,461  ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ. ಇವುಗಳಿಂದ ಈ ಪ್ರದೇಶದಲ್ಲಿ 3,538 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಸರ್ಕಾರದ ಕಡೆಯಿಂದ ನಡೆಯುತ್ತಿರುವ ಇಂತಹ  ಸಂಘಟಿತ ಪ್ರಯತ್ನಗಳು ‘ಬೆಂಗಳೂರಿನ ಆಚೆ ಉಪಕ್ರಮದ ಭಾಗವಾಗಿವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...