ಬೆಂಗಳೂರು : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಯಾವುದೇ ಭಾಗದಲ್ಲೂ ಲೋಡ್ ಶೆಡ್ಡಿಂಗ್ ಮಾಡಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಯಾವುದೇ ಭಾಗದಲ್ಲಿ ಅಘೋಷಿತ ವಿದ್ಯುತ್ ಕಡಿತ ಮಾಡಿಲ್ಲ. ಲೋಡ್ ಶೆಡ್ಡಿಂಗ್ ಮಾಡುವಂತೆ ಅಧಿಕಾರಿಗಳಿಗೆ ಯಾವ ಸೂಚನೆಯನ್ನೂ ನೀಡಿಲ್ಲ. ವಿದ್ಯುತ್ ಸ್ಥಾವರಗಳ ದುರಸ್ಥಿ ಕಾರ್ಯಗಳು ಇರುವಂತಹ ಕಡೆಗಳಲ್ಲಿ ಕೊಂಚ ವಿದ್ಯುತ್ ವ್ಯತ್ಯಯ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮಳೆ ಕೊರತೆಯಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಬೇಸಿಗೆಯಲ್ಲಿ ಇರುವಷ್ಟು ವಿದ್ಯುತ್ ಬೇಡಿಕೆ ಈಗಲೇ ಇದೆ. ಥರ್ಮಲ್ ವಿದ್ಯುತ್ ಘಟಕ ದುರಸ್ತಿ ನಡೆಯುತ್ತಿದೆ. ಆದರೆ ಎಲ್ಲಿಯೂ ಲೋಡ್ ಶೆಡ್ಡಿಂಗ್ ಗೆ ಸೂಚನೆ ನೀಡಿಲ್ಲ. ಲೋಡ್ ಶೆಡ್ಡಿಂಗ್ ಅಗತ್ಯ ಬಿದ್ದರೆ ಮೊದಲೇ ತಿಳಿಸಿ ಮಾಡುತ್ತೇವೆ ಎಂದರು.