ಬೆಂಗಳೂರು : ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ಜನತೆಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಮಹತ್ವದ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಇ ಸದ್ಯ 1,500 ಮೆಗಾ ವ್ಯಾಟ್ ವಿದ್ಯುತ್ ಕೊರತೆಯಿದ್ದು, ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಂಡಿದ್ದೇವೆ. ಶೀಘ್ರವೇ ವಿದ್ಯುತ್ ಸಮಸ್ಯೆ ಬಗೆಹರಿಯಲಿದೆ. ಜನರಿಗೆ ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಹಿಂದಿನ ವರ್ಷ ಆಗಸ್ಟ್ ಮತ್ತು ಸೆಪ್ಟೆಂಬರ್ ಅವಧಿಯಲ್ಲಿ 8,500 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇತ್ತು. ಈಗ ಬೇಡಿಕೆ ಎರಡು ಪಟ್ಟು ಹೆಚ್ಚಾಗಿದ್ದು, 16 ಸಾವಿರ ಮೆಗಾ ವ್ಯಾಟ್ ಬೇಕಿದೆ. ಒಂದೇ ಬಾರಿಗೆ ಬೇಡಿಕೆ ಸೃಷ್ಟಿಯಾದರೆ ಪೂರೈಕೆ ಕಷ್ಟವಾಗುತ್ತದೆ ಎಂದರು.