alex Certify ಪೊಲೀಸ್ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ 6 ಸಾವಿರ ಪೇದೆಗಳ ನೇಮಕಾತಿಗೆ ಅರ್ಜಿ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ 6 ಸಾವಿರ ಪೇದೆಗಳ ನೇಮಕಾತಿಗೆ ಅರ್ಜಿ!

ಬೆಂಗಳೂರು : ಪೊಲೀಸ್ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 6 ಸಾವಿರ ಪೊಲೀಸ್ ಪೇದೆಗಳ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ 2,500 ಹಾಗೂ ರಾಜ್ಯವ್ಯಾಪ್ತಿ 3,500 ಪೊಲೀಸ್‌ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದ್ದು, ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ ಎಂದು ತಿಳಿಸಿದ್ದಾರೆ.

ಒಂದು ಸ್ಥಳದಲ್ಲಿ ವರ್ಷಕ್ಕೆ 350ಕ್ಕಿಂತಲೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾದರೆ ಅಲ್ಲಿ ಪೊಲೀಸ್‌ ಠಾಣೆಗಳನ್ನು ಮಾಡಬಹುದು. ಎಲ್ಲಿ ಠಾಣೆಗಳ ಅಗತ್ಯ ಇದೆ ಎಂಬುದನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದರೆ ಪರಿಶೀಲಿಸಿ ಅನುಮತಿ ನೀಡಲಾಗುವುದು ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...