alex Certify BIG NEWS : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ‘ಪೊಲೀಸ್ ಗೃಹ -2025’ ಕಾರ್ಯಕ್ರಮದಡಿ 10 ಸಾವಿರ ಮನೆಗಳ ನಿರ್ಮಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ‘ಪೊಲೀಸ್ ಗೃಹ -2025’ ಕಾರ್ಯಕ್ರಮದಡಿ 10 ಸಾವಿರ ಮನೆಗಳ ನಿರ್ಮಾಣ

ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ 1.10 ಲಕ್ಷ ಸಿಬ್ಬಂದಿ ಇದ್ದು, ಇದರಲ್ಲಿ ಕನಿಷ್ಟ 70 ರಿಂದ 80 ಸಾವಿರ ಸಿಬ್ಬಂದಿಗೆ ಪೊಲೀಸ್ ವಸತಿ ಸಮುಚ್ಚಯ ನಿರ್ಮಾಣ ಮಾಡಿಕೊಡಬೇಕು ಎಂಬ ಸಂಕಲ್ಪ ಹೊಂದಿದ್ದು, ಒಂದು ಯೋಜನೆಯನ್ನಾಗಿ ಮಾಡಿ ವಸತಿ ಸಮುಚ್ಚಯ ನಿರ್ಮಾಣ ಕಾರ್ಯವನ್ನು ವ್ಯವಸ್ಥಿತವಾಗಿ ಮಾಡಿಕೊಡಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.

ಇಲ್ಲಿನ ಬಸವೇಶ್ವರ ನಗರದ ಪೊಲೀಸ್ ವಸತಿ ಗೃಹದಲ್ಲಿ ರಾಜ್ಯ ಪೊಲೀಸ್, ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪೊಲೀಸ್ ಸಮುಚ್ಚಯ ಮತ್ತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ, ತಳಕು ಪೊಲೀಸ್ ಠಾಣೆಗಳ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ನಾನು ಮೂರನೇ ಬಾರಿಗೆ ಗೃಹ ಸಚಿವನಾಗಿ ಅಧಿಕಾರ ಸ್ವೀಕರಿಸಿದ್ದು, ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ಮಾಡುವ ನಿಟ್ಟಿನಲ್ಲಿ “ಪೊಲೀಸ್ ಗೃಹ” ಯೋಜನೆಯನ್ನು ಮಾಡಿ 10 ಸಾವಿರ ಮನೆಗಳನ್ನು ಕಟ್ಟಲಾಗುತ್ತಿದೆ. ಪೊಲೀಸ್ ಕುಟುಂಬಕ್ಕೆ ಅನಿಲ ಸಂಪರ್ಕ, ತ್ಯಾಜ್ಯ ವಿಲೇವಾರಿ, ಆಧುನಿಕ ಮಾದರಿಯ ಕಿಚನ್ ಸೇರಿದಂತೆ ನವೀನ ಮಾದರಿಗೆ ಅನುಗುಣವಾಗಿ ಅತ್ಯುತ್ತಮ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಪ್ರಾರಂಭದಲ್ಲಿ ಒಂದು ಘಟಕ ವೆಚ್ಚಕ್ಕೆ ರೂ.16 ಲಕ್ಷ ಇತ್ತು, ಇದೀಗ ರೂ.20 ಲಕ್ಷಕ್ಕೆ ಏರಿಕೆಯಾಗಿದೆ. ಬಹಳ ಅಚ್ಚುಕಟ್ಟಾಗಿ, ವ್ಯವಸ್ಥಿತವಾಗಿ ಮನೆಗಳನ್ನು ನಿರ್ಮಾಣ ಮಾಡಿಕೊಡಲಾಗಿದೆ. ಪೊಲೀಸ್ ಸಮುಚ್ಚಯದಲ್ಲಿ ಪೊಲೀಸ್ ಸಿಬ್ಬಂದಿ ಅಗತ್ಯವಾದ ಉತ್ತಮ ಸೌಲಭ್ಯಗಳನ್ನು ಒದಗಿಸಿಕೊಡಲಾಗಿದೆ ಎಂದರು.

ಪೊಲೀಸ್ ಸಿಬ್ಬಂದಿಗೆ ಉತ್ತಮ ಸೌಲಭ್ಯ ಒದಗಿಸಿದರೆ ಅವರು ಒಳ್ಳೆಯ ಕೆಲಸಗಳನ್ನು ನಿರ್ವಹಿಸುತ್ತಾರೆ ಎಂದು ಹೇಳಿದ ಅವರು, ಪ್ರಸ್ತುತ ದಿನಗಳಲ್ಲಿ ಪೊಲೀಸ್ ಇಲಾಖೆ ಹೊಸ ಬದಲಾವಣೆ ಕಾಣುತ್ತಿದೆ. ಹೊಸ ರೂಪದಲ್ಲಿ ಅನೇಕ ರೀತಿಯ ಕ್ರೈಂಗಳು ಆಗುವುದಕ್ಕೆ ಪ್ರಾರಂಭವಾಗಿವೆ. ಸೈಬರ್ ಕ್ರೈಂ ವಿಶ್ವದಲ್ಲಿಯೇ ಹೊಸ ಆಯಾಮ ಪಡೆದುಕೊಂಡಿದೆ. ಇದಕ್ಕೆ ಅನುಗುಣವಾಗಿ ಪೊಲೀಸ್ ಇಲಾಖೆ ಕೂಡ ಆಧುನಿಕ ತಂತ್ರಜ್ಞಾನ ಹಾಗೂ ವೈಜ್ಞಾನಿಕವಾಗಿ ಅಪರಾಧ ಪತ್ತೆ ಕಾರ್ಯವನ್ನು ತ್ವರಿತವಾಗಿ ಮಾಡುತ್ತಿದೆ ಎಂದು ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...