ಬೆಂಗಳೂರು : ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎಂಬಂತೆ 11 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆ ಮಾಡುವುದಾಗಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ.
ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸು ನನಸು ಮಾಡಬೇಕೆಂಬ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜು ಆರಂಭಿಸಲು ಸರ್ಕಾರ ನಿರ್ಧರಿಸಿದೆ. 11 ಹೊಸ ಕಾಲೇಜುಗಳ ಸ್ಥಾಪನೆಗಾಗಿ ಆರ್ಥಿಕ ಇಲಾಖೆಗೆ ಅನುಮತಿ ಕೇಳಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ.