alex Certify ಗರ್ಭಿಣಿ, ಬಾಣಂತಿ ಮಹಿಳೆಯರಿಗೆ ಗುಡ್ ನ್ಯೂಸ್ : 11,000 ರೂ. ಸಹಾಯಧನ, ʻಮಾತೃ ವಂದನಾ ಯೋಜನೆʼಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗರ್ಭಿಣಿ, ಬಾಣಂತಿ ಮಹಿಳೆಯರಿಗೆ ಗುಡ್ ನ್ಯೂಸ್ : 11,000 ರೂ. ಸಹಾಯಧನ, ʻಮಾತೃ ವಂದನಾ ಯೋಜನೆʼಗೆ ಅರ್ಜಿ ಆಹ್ವಾನ

ಬೆಂಗಳೂರು : ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ “ಪೌಷ್ಠಿಕ ಆಹಾರ” ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರ ಕ್ಷೇಮಾಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ “ಪೌಷ್ಠಿಕ ಆಹಾರ” ಪಡೆಯುವುದಕ್ಕಾಗಿ ಆಯ್ಕೆಯಾದ ಫಲಾನುವಿಗಳ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

ಈ ಯೋಜನೆಯಲ್ಲಿ ಕೆಲವು ಬದಲಾವಣೆಯಾಗಿದ್ದು, ಪ್ರಸ್ತುತ ಮಾತೃ ವಂದನಾ ಯೋಜನೆಯಡಿ ಮೊದಲ ಎರಡು ಜೀವಂತ ಮಕ್ಕಳಿಗೆ ಈ ಯೋಜನೆಯ ಪ್ರಯೋಜನ ಲಭ್ಯವಾಗುತ್ತದೆ. ಆದರೆ ಎರಡನೇ ಮಗುವು ಹೆಣ್ಣು ಮಗುವಾಗಿರಬೇಕು. ಮೊದಲ ಮಗುವಿಗೆ ಎರಡು ಕಂತುಗಳಲ್ಲಿ ರೂ.5000/-ಗಳನ್ನು ನೀಡಲಾಗುವುದು. ಮೊದಲನೇಯ ಕಂತು ರೂ.3000/-ಗಳನ್ನು ಗರ್ಭಿಣಿ ಎಂದು ಅಂಗನವಾಡಿ ಕೇಂದ್ರದಲ್ಲಿ ನೋಂದಣಿ (150 ದಿನಗಳ ಒಳಗಾಗಿ), ಎರಡನೇ ಕಂತು ರೂ.2000/-ಗಳನ್ನು ಮಗುವಿನ ಜನನ ನೋಂದಣಿ ಹಾಗೂ 3ನೇ ಪೆಂಟಾ ಪೂರ್ಣಗೊಂಡ ನಂತರ ನೀಡಲಾಗುತ್ತದೆ.

ಎರಡನೇ ಹೆಣ್ಣು ಮಗು ಜನನಿಸಿದರೆ ಒಂದೇ ಕಂತಿನಲ್ಲಿ ರೂ.6000/-ಗಳನ್ನು ನೀಡಲಾಗುವುದು. ಎರಡನೇ ಮಗುವಿಗೆ ಪ್ರಯೋಜನಗಳನ್ನು ಪಡೆಯುವುದಕ್ಕಾಗಿ ಗರ್ಭಿಣಿ ಅವಧಿಯಲ್ಲಿ ಅಂಗನವಾಡಿ ಕೇಂದ್ರದಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದ್ದಾರೆ.

ಸಹಾಯ ಧನವನ್ನು ನೇರ ನಗದು ವರ್ಗಾವಣೆ(ಡಿಬಿಟಿ) ಮೂಲಕ ಫಲಾನುಭವಿಯ ಆಧಾರ್ ಲಿಂಕ್ ಹೊಂದಿರುವ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು.

ದಾಖಲೆಗಳು:

ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಮತ್ತು ಶಿಶು ರಕ್ಷಣಾ ಕಾರ್ಡ್ (ತಾಯಿ ಕಾರ್ಡ್) ಪ್ರತಿ. ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಇವುಗಳಲ್ಲಿ ಯಾವುದಾದರೂ ಒಂದು ನಕಲು ಪ್ರತಿ, ಅರ್ಜಿ ನಮೂನೆಗಳು ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ದೊರೆಯುತ್ತವೆ.

ಅರ್ಹ ಫಲಾನುಭವಿಗಳು ಹತ್ತಿರದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು ಅಥವಾ ಸ್ವಯಂ ಫಲಾನುಭವಿಯ ಪೋರ್ಟಲ್ (citizen login): http://pmmvy.wed.gov.in ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ, ಮಹಿಳಾ ಮೇಲ್ವಿಚಾರಕಿ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...