ಬೆಂಗಳೂರು : ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಬಡ್ತಿ ಪಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಬಿಜೆಪಿಯ ಡಾ.ವೈ.ಎ ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಿಂದ ಪದನ್ನೋತಿ ಪಡೆದದವರಿಗೆ ಕಾಲಮಿತಿ ವೇತನ ನೀಡದ ಪರಿಣಾಮ ಪದನ್ನೋತಿ ಪಡೆಯದ ಶಿಕ್ಷಕರಿಗಿಂತ ಕಡಿಮೆ ವೇತನ ಪಡೆಯುತ್ತಿರುವುದರಿಂದ ಆಗುತ್ತಿರುವ ಸಮಸ್ಯೆ ಪರಿಹರಸಲು ಶೀಘ್ರದಲ್ಲೇ ಆರ್ಥಕ ಇಲಾಖೆ ಅಧಿಕಾರಿಗಳ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಬಡ್ತಿ ಪಡೆಯದೇ ಇರುವ ಶಿಕ್ಷಕರ ವೇತನ, ಬಡ್ತಿ ಹೊಂದಿದ ಶಿಕ್ಷಕರಿಗಿಂತ ಹೆಚ್ಚಾಗಿರುವುದು ಕಂಡುಬಂದಿದೆ. ಬಹಳ ವರ್ಷಗಳಿಂದ ಈ ಸಮಸ್ಯೆಯಿದ್ದು, ಅಧಿವೇಶನದ ಬಳಿಕ ಶಿಕ್ಷಕ ಕ್ಷೇತ್ರದ ಪ್ರತಿನಿಧಿಗಳು ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಪರಿಹಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.