alex Certify ‘PUC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ಎಲ್ಲಾ ವಿಷಯಗಳಿಗೂ ಸಿಗಲಿದೆ ‘Internal Marks’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘PUC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ಎಲ್ಲಾ ವಿಷಯಗಳಿಗೂ ಸಿಗಲಿದೆ ‘Internal Marks’

ಬೆಂಗಳೂರು : ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ಮುಂದೆ ಎಲ್ಲಾ ವಿಷಯಗಳಿಗೂ ಇಂಟರ್ನಲ್ ಮಾರ್ಕ್ಸ್ ಸಿಗಲಿದೆ. ರಾಜ್ಯ ಸರ್ಕಾರವು ಪಿಯುಸಿ ತರಗತಿಗಳಿಗೆ ಹೊಸ ಅಂಕ ಮಾದರಿ ಜಾರಿ ಮಾಡಿದ್ದು, ಈ ಮೂಲಕ ಪ್ರಾಯೋಗಿಕ ಪರೀಕ್ಷೆ ಹೊಂದಿರದ ವಿಷಯಗಳಿಗೆ ಇನ್ಮುಂದೆ 20 ಅಂಕ ಆಂತರಿಕ ಅಂಕ ನೀಡಲು ನಿರ್ಧಾರ ಮಾಡಲಾಗಿದೆ.

ಮೊದಲು ಪ್ರಾಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಿಗೆ 100 ಅಂಕಕ್ಕೆ ಪರೀಕ್ಷೆ ಬರೆಯಬೇಕಿತ್ತು. ಈಗ ಈ ನಿಯಮ ಬದಲಾವಣೆ ಮಾಡಿ, 20 ಆಂತರಿಕ ಅಂಕ & 80 ಅಂಕ ಥಿಯರಿ ಪರೀಕ್ಷೆಗೆ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.ಪ್ರಥಮ ಮತ್ತು ದ್ವಿತಿಯ ಪಿಯುಸಿ ಎರಡು ತರಗತಿಗಳಿಗೆ ಈ ಹೊಸ ನಿಯಮ ಅನ್ವಯವಾಗಲಿದೆ. ಪ್ರಾಯೋಗಿಕ ಪರೀಕ್ಷೆ ಹೊಂದಿರದ ವಿಷಯಗಳಿಗೆ ಇನ್ಮುಂದೆ 20 ಅಂಕ ಆಂತರಿಕ ಅಂಕ ನೀಡಲು ನಿರ್ಧರಿಸಲಾಗಿದೆ.

ಪ್ರಾಯೋಗಿಕ ಪರೀಕ್ಷೆಗಳು ಇಲ್ಲದ ಎಲ್ಲಾ ವಿಷಯಗಳಿಗೆ ಇನ್ನು ಮುಂದೆ 20 ಆಂತರಿಕ ಅಂಕಗಳನ್ನು ನಿಗದಿ ಮಾಡಲಾಗಿದೆ.ವಿಜ್ಞಾನದ ವಿಷಯಗಳಲ್ಲಿ 70 ಅಂಕಗಳಿಗೆ ಥಿಯರಿ ಪರೀಕ್ಷೆ ಮತ್ತು 30 ಅಂಕಗಳನ್ನು ಪ್ರಾಯೋಗಿಕ ಪರೀಕ್ಷೆ ಆಧರಿತ ಆಂತರಿಕ ಅಂಕಗಳಾಗಿ ನೀಡಲಾಗುತ್ತದೆ. ಇನ್ನು ವಿಜ್ಞಾನ ಹೊರತಾದ ಇತರ ವಿಷಯಗಳಲ್ಲಿ ಮೊದಲು 100 ಅಂಕಗಳಿಗೆ ಪರೀಕ್ಷೆ ನಡೆಯುತ್ತಿತ್ತು. ಇನ್ನು 80 ಅಂಕಗಳಿಗೆ ಮಾತ್ರ ಪರೀಕ್ಷೆ ಇರುತ್ತದೆ. ಉಳಿದ 20 ಅಂಕವನ್ನು ಇಂಟರ್ನಲ್ ಮಾರ್ಕ್ಸ್ ಆಗಿ ನಿಗದಿ ಮಾಡಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...