ಬೆಂಗಳೂರು : ಪಡಿತರ ಚೀಟಿದಾರರಿಗೆ ಸಚಿವ ಕೆ.ಎಚ್.ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಹಣದ ಬದಲು ಅಕ್ಕಿ ವಿತರಣೆಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸದ್ಯ ಐದು ಕೆಜಿ ಅಕ್ಕಿ ವಿತರಿಸಲಾಗುತ್ತಿದ್ದು, ಐದು ಕೆಜಿ ಅಕ್ಕಿಯ ಹಣವನ್ನು ಪಡಿತರದಾರರ ಖಾತೆಗೆ ಜಮಾ ಮಾಡಲಾಗುತ್ತಿದೆ. ತೆಲಂಗಾಣ, ಆಂಧ್ರ ಮತ್ತು ಛತ್ತೀಸಗಡ್ದಲ್ಲಿ ಅಕ್ಕಿ ಖರೀದಿಗೆ ಪರಿಶೀಲನೆ ನಡೆಸಲಾಗುತ್ತಿದೆ’ . ಹಣದ ಬದಲು ಅಕ್ಕಿ ವಿತರಣೆಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ .ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ 1.16 ಕೋಟಿ ಪಡಿತರ ಚೀಟಿಗಳಿದ್ದು 4 ಕೋಟಿ ಫಲಾನುಭವಿಗಳಿದ್ದಾರೆ. ಈ ತಿಂಗಳು 644 ಕೋಟಿ ರೂ. ಹಣವನ್ನು ಪಡಿತರದಾರರ ಖಾತೆಗೆ ಜಮಾ ಮಾಡಲಾಗಿದೆ ಎಂದರು.