alex Certify ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಅನ್ನಭಾಗ್ಯದ ‘ಸ್ಮಾರ್ಟ್ ಕಾರ್ಡ್’ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಅನ್ನಭಾಗ್ಯದ ‘ಸ್ಮಾರ್ಟ್ ಕಾರ್ಡ್’ ವಿತರಣೆ

ಕೋಲಾರ: ಪಡಿತದಾರರಿಗೆ ಶೀಘ್ರವೇ ಅನ್ನಭಾಗ್ಯದ ಸ್ಮಾರ್ಟ್ ಕಾರ್ಡ್ ಕೊಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವ ಕೆ.ಎಚ್.ಮುನಿಯಪ್ಪ ‘ಅನ್ನಭಾಗ್ಯ ಯೋಜನೆಯಡಿ 1.13 ಕೋಟಿ ಕಾರ್ಡ್ದಾರರಿಗೆ ಸುಮಾರು 4 ಕೋಟಿ ಜನರಿಗೆ ಹಣ ಹಾಕಿದ್ದೇವೆ, ಪಡಿತದಾರರಿಗೆ ಶೀಘ್ರವೇ ಅನ್ನಭಾಗ್ಯದ ಸ್ಮಾರ್ಟ್ ಕಾರ್ಡ್ ಕೊಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಏಳು ಲಕ್ಷ ಕಾರ್ಡ್ದಾರರು ಬ್ಯಾಂಕ್ ಖಾತೆ ತೆರೆದಿಲ್ಲ, ಹಾಗಾಗಿ ಹಣ ಹಾಕಲು ಸಮಸ್ಯೆಯಾಗುತ್ತಿದೆ. ಅವರಿಗೂ ಹಣ ಸಂದಾಯ ಮಾಡಲು ಇಲಾಖೆ ಅಧಿಕಾರಿಗಳೇ ಖುದ್ದಾಗಿ ಕಾರ್ಡ್ಗಳನ್ನು ಪರಿಶೀಲಿಸುತ್ತಿದ್ದಾರೆ ಎಂದರು.
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ಹಣ ವರ್ಗಾವಣೆ ಮಾಡಲಾಗುತ್ತಿದೆ. 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...