ಬೆಂಗಳೂರು : ಶೀಘ್ರವೇ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಶೀಘ್ರವೇ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ. ಅಕ್ಕಿ ಖರೀದಿ ಸಂಬಂಧ ಟೆಂಡರ್ ಪ್ರಕ್ರಿಯೆ ಶುರು ಮಾಡುತಿದ್ದೇವೆ. ಟೆಂಡರ್ ಬಳಿಕ ಅಕ್ಕಿ ರಾಜ್ಯಕ್ಕೆ ಬರಲಿದ್ದು, ಬಳಿಕ ಗ್ಯಾರಂಟಿಯಂತೆ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ವಿತರಣೆ ಮಾಡಲಿದ್ದೇವೆ ಎಂದರು.
ನ್ಯಾಯಬೆಲೆ ಅಂಗಡಿಯವರ ಜೊತೆಗೆ ಈಗಾಗಲೇ ಮಾತುಕತೆ ನಡೆಸಿದ್ದೇವೆ. 1 ತಿಂಗಳಲ್ಲಿ ಅಕ್ಕಿ ಕೊಡುತ್ತೇವೆ, ಪಡಿತರದಾರರಿಗೆ ಅಕ್ಕಿ ನೀಡಲಿದ್ದೇವೆ ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿತ್ತು. ಈ ವೇಳೆ ಅರ್ಹ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ, ಉಳಿದ 5 ಕೆಜಿ ಅಕ್ಕಿಬದಲಿಗೆ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತಿತ್ತು. ಇದೀಗ ಸಂಪೂರ್ಣವಾಗಿ 10 ಕೆಜಿ ಅಕ್ಕಿ ನೀಡಲು ನಿರ್ಧರಿಸಲಾಗಿದೆ.