alex Certify ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : 5 ಕೆಜಿ ಅಕ್ಕಿ ಹಣದ ಬದಲು ʻಕುಚಲಕ್ಕಿʼ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : 5 ಕೆಜಿ ಅಕ್ಕಿ ಹಣದ ಬದಲು ʻಕುಚಲಕ್ಕಿʼ ವಿತರಣೆ

ಬೆಳಗಾವಿ : ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 5 ಕೆಜಿ ಕುಚಲಕ್ಕಿ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್.‌ ಮುನಿಯಪ್ಪ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಡಿ ಕಾಂಗ್ರೆಸ್‌ ನ ಅಶೋಕ ಕುಮಾರ್‌ ರೈ ವಿಷಯ ಪ್ರಸ್ತಾಪಿಸಿ, ಈಗಾಗಲೇ ಹತ್ತು ಕೆಜಿ ಅಕ್ಕಿ ಪೈಕಿ ಐದು ಕೆಜಿ ಅಕ್ಕಿಯನ್ನು ನೀಡುತ್ತಿದ್ದು, ಉಳಿದ 5  ಕೆಜಿ ಅಕ್ಕಿಯ ಬದಲಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ಮುಂದೆ ನಗದು ಬದಲು ಅಕ್ಕಿ ಕೊಡುವುದಾದರೆ ಕುಚಲಕ್ಕಿ ಕೊಡಿ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಕೆ.ಹೆಚ್.‌ ಮುನಿಯಪ್ಪ, ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಕೊಡುವುದಾದರೆ ಕುಚಲಕ್ಕಿ ಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...