alex Certify ಪಡಿತರದಾರರಿಗೆ ಗುಡ್ ನ್ಯೂಸ್ : ಒಂದು ವಾರದಲ್ಲಿ 10 ಕೆಜಿ ಅಕ್ಕಿ ವಿತರಣೆ ಫೈನಲ್ : ಸಚಿವ ಕೆ.ಹೆಚ್ ಮುನಿಯಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರದಾರರಿಗೆ ಗುಡ್ ನ್ಯೂಸ್ : ಒಂದು ವಾರದಲ್ಲಿ 10 ಕೆಜಿ ಅಕ್ಕಿ ವಿತರಣೆ ಫೈನಲ್ : ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು : ಪಡಿತರದಾರರಿಗೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಒಂದು ವಾರದಲ್ಲಿ 10 ಕೆಜಿ ಅಕ್ಕಿ ವಿತರಣೆ ಫೈನಲ್ ಆಗಲಿದೆ ಎಂದರು.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಬೆಲೆ ನಿಗದಿ ವಿಚಾರವಾಗಿ ಮಾತುಕತೆ ನಡೆಯುತ್ತಿದೆ. ತೆಲಂಗಾಣ, ಆಂಧ್ರಪ್ರದೇಶ, ಛತ್ತೀಸ ಗಢ ಸರ್ಕಾರ ಮುಂದೆ ಬಂದಿವೆ. ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಆದಷ್ಟು ಬೇಗ ಹತ್ತು ಕೆಜಿ ಅಕ್ಕಿ ನೀಡುವ ಕೆಲಸ ಮಾಡುತ್ತೇವೆ . ಶೀಘ್ರವೇ 10 ಕೆಜಿ ಅಕ್ಕಿ ವಿತರಣೆ ಮಾಡಲಿದ್ದೇವೆ ಎಂದು ಸಚಿವ ಮುನಿಯಪ್ಪ ಹೇಳಿದರು.

ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು 10 KG ಅಕ್ಕಿ ನೀಡಲಾಗುವುದು. 114 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಈ ತಾಲೂಕುಗಳಿಗೆ 10 ಕೆಜಿ ಅಕ್ಕಿ ವಿತರಣೆಗೆ ಸಿದ್ದತೆ ನಡೆಸಲಾಗುತ್ತಿದೆ ಎಂದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...