ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ವರ್ಗದ ಸಂಶೋಧನಾ ವಿದ್ಯಾಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ ರೂ.25,000 ಗಳಂತೆ ಶಿಷ್ಯವೇತನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತಕ ಸಾಲಿನ ಸಾಲಿನ ಆಯವ್ಯ ಭಾಷಣದ ಕಂಡಿಕೆ (176)ರಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ವರ್ಗದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ, ಮಾಸಿಕ ರೂ.25,000 ಗಳಂತೆ ಶಿಷ್ಯವೇತನ ನೀಡಲಾಗುವುದೆಂದು ಘೋಷಿಸಲಾಗಿರುತ್ತದೆ.
ಅರ್ಜಿ ಸಲ್ಲಿಸಲು ಡಿ.14 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಅಥವಾ ದೂ.08392-242453 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.