ಶಿವಮೊಗ್ಗ : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ.) ವಿಜ್ಞಾನ ಮತ್ತು ಇಂಜಿನಿಯರಿಂಗ್ನಲ್ಲಿ ಪಿಹೆಚ್.ಡಿ. ಸಂಶೋಧನೆಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ.
2023-24ನೇ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ/ ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್.ಡಿ. ಪದವಿಗೆ ನೊಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳು ಆನ್ಲೈನ್ http://ksteps.karnataka.gov.in ಮೂಲಕ ಅಕ್ಟೋಬರ್ 30ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.